
ಕಲಬುರಗಿ, ಏ.27: ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ 2 ಕೋಟಿ ಹಣ ಪತ್ತೆಯಾದ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ರೈಲಿನಿಂದ ಇಳಿದು ವಾಹನ ಹತ್ತುವಾಗ ದಾಳಿ ಮಾಡಿ ಹಣವನ್ನ ಜಪ್ತಿ ಮಾಡಲಾಗಿದೆ. ಇದು ಕಲಬುರಗಿ ಮಾಜಿ ಮೇಯರ್ ಅವರಿಗೆ ಸೇರಿದ ಕಾರು ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಇನ್ನು ಹಣವನ್ನು ಯಾತಕ್ಕಾಗಿ ಸಾಗಾಟ ಮಾಡಲಾಗುತ್ತಿದ್ದು ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಕೊಡಗು: ಜಿಲ್ಲೆಯ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಿಶಾಂತ್ (24)ಎಂಬುವವರು ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಈಜು ಬಾರದೆ ನದಿಯಲ್ಲಿಮುಳುಗಿ ಕೊನೆಯುಸಿರೆಳೆದಿದ್ದಾರೆ. ಇದೀಗ ದುಬಾರೆ ರಾಫ್ಟಿಂಗ್ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ರೂ. ಹಣ ಪತ್ತೆ
ಕಲಬುರಗಿ: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಪತಿ ಸಾವನ್ನಪ್ಪಿದ್ದು, ಪತ್ನಿಗೆ ಗಂಭೀರ ಗಾಯವಾದ ಘಟನೆ ಆಳಂದ ತಾಲೂಕಿನ ಢೋಗಿ ನಾಲಾ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿ ಅರ್ಜುನ್ ಮೃತರು. ಮಹಾರಾಷ್ಟ್ರದ ಪುಣೆಯಿಂದ ಯಾದಗಿರಿ ಕಡೆಗೆ ಬೈಕ್ ಮೇಲೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:37 pm, Sat, 27 April 24