ಹಣಕ್ಕೆ ಬೇಡಿಕೆ: ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿಯನ್ನ ಬೆತ್ತಲೆ ಮಾಡಿ ಹಲ್ಲೆ, ಆರೋಪಿಗಳು ಅಂದರ್​

ಸೇಡಂ(Sedam) ತಾಲೂಕಿನ ದೇವನೂರ ಗ್ರಾಮದ ನಿವಾಸಿಯಾದ ಕಾರು ವ್ಯಾಪಾರಿ ಅರ್ಜುನ್ ಎಂಬುವವರನ್ನು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಆತನನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಣಕ್ಕೆ ಬೇಡಿಕೆ: ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿಯನ್ನ ಬೆತ್ತಲೆ ಮಾಡಿ ಹಲ್ಲೆ, ಆರೋಪಿಗಳು ಅಂದರ್​
ಕಾರು ವ್ಯಾಪಾರಿ ಮೇಲೆ ಹಲ್ಲೆ ಮಾಡಿ ಆರೋಪಿಗಳು
Edited By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 2:59 PM

ಕಲಬುರಗಿ, ಮೇ.11: ಹಣಕ್ಕೆ ಬೇಡಿಕೆ ಇಟ್ಟು ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯಲ್ಲಿ ನಡೆದಿದೆ. ಸೇಡಂ(Sedam) ತಾಲೂಕಿನ ದೇವನೂರ ಗ್ರಾಮದ ನಿವಾಸಿಯಾದ ಕಾರು ವ್ಯಾಪಾರಿ ಅರ್ಜುನ್​, ರಮೇಶ್ ಎಂಬಾತನಿಗೆ ಕಾರು ತೋರಿಸಲು ಬಂದಿದ್ದಾನೆ. ಈ ವೇಳೆ ಮನೆಯೊಂದರಲ್ಲಿ ಕೂಡಿಹಾಕಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಹಿಂಸೆ ಕೊಟ್ಟಿದ್ದಾರೆ. ಆತನಿಂದ ಹಣ ಹಾಕಿಸಿಕೊಂಡ ಬಳಿಕವೂ ದುಷ್ಕರ್ಮಿಗಳು ಮತ್ತಷ್ಟು ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ಆರೋಪಿಗಳು ಅಂದರ್​

ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಇಮ್ರಾನ್ ಪಟೇಲ್, ಮೊಹಮ್ಮದ್ ಮತೀನ್ ಸೇರಿ ಹಲವರು ಕೃತ್ಯ ಎಸಗಿದ್ದರು. ಈ ಕುರಿತು ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಗ್ರಾ.ಪಂಚಾಯತಿ ವಾಟರ್​ಮ್ಯಾನ್​ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

ಹೆದ್ದಾರಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ; ಓರ್ವ ಸಾವು

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲೂಕಿನ ಯನಗುಂಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಓರ್ವ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌(70) ಮೃತ ರ್ದುದೈವಿ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದ ರಬಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Sat, 11 May 24

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us