ಕಲಬುರಗಿ, ಮೇ.02: ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ನಿಖಿಲ್ ಪೂಜಾರಿ(23) ನೇಣುಬಿಗಿದುಕೊಂಡು ಸಾವನ್ನಪ್ಪಿದವರು. ಕಳೆದ ಏ.27 ರಂದು ಮೃತ ನಿಖಿಲ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದರಿಂದ ಹೆದರಿ ಇಂದು ಗ್ರಾಮದ ಹೊರವಲಯದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆಯೊಂದು ನಡೆದಿತ್ತು. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಾದ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು.
ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ನರೋಣಾ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಸಮುದಾಯದ ಯುವಕರು ದೂರು ನೀಡಿದ್ದು, ಏ.27 ರಂದು ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್ ಪೂಜಾರಿ ಇಂದು ನೇಣಿಗೆ ಶರಣಾಗಿದ್ದಾನೆ. ಇದೇ ವೇಳೆ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಶವವನ್ನು ಕಲಬುರಗಿಗೆ ತರಲು ಮುಂದಾಗಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ
ವಿಜಯಪುರ: ನಗರದ ಜಲ ನಗರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಟೇಲರ್ ಶಾಪ್ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಇನ್ನು ಬೆಂಕಿ ಆರಿಸುವಷ್ಟರಲ್ಲಿ ಟೇಲರ್ ಶಾಪ್ ನಲ್ಲಿದ್ದ ಬಟ್ಟೆ ಬರೆಗಳು ಸುಟ್ಟು ಕರಕಲಾಗಿದ್ದು, ಘಟನೆಯಿಂದ ಜಲನಗರದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಬೆಂಕಿ ನಂದಿಸಿದ ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:44 pm, Thu, 2 May 24