ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಸಹಚರರು ಅರೆಸ್ಟ್
ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಸಹಚರರು ಅರೆಸ್ಟ್ ಆಗಿದ್ದಾರೆ. ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಸಿಐಡಿಯಿಂದ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ನಿವಾಸಿಗಳಾದ ಮಹೇಶ್ ಹಿರೋಳಿ, ಸೈಫನ್ ಬಂಧಿತರು. ಬಂಧಿತರು ಕಿಂಗ್ಪಿನ್ ರುದ್ರಗೌಡ ಪಾಟೀಲ್ನ ಸಹಚರರು.
ಇವರು ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಸೈಫನ್ ಸಹೋದರ ಪಿಎಸ್ಐ ಆಗಿ ಆಯ್ಕೆಯಾಗಿದ್ದ. ಆತನ ಆಯ್ಕೆ ಬಗ್ಗೆಯೂ ಸಿಐಡಿ ತಂಡ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಇಂದು ರಾಜ್ಯಸಭೆಗೆ ಚುನಾವಣೆ: ಕಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ನಾಲ್ವರು ಅಭ್ಯರ್ಥಿಗಳು
ಕಲಬುರಗಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲು ಕಲಬುರಗಿ ನಗರದ ನೊಬೆಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರದಲ್ಲಿ ಇಸ್ಮಾಯಿಲ್ ಖಾದೀರ್ ಅಕ್ರಮವಾಗಿ ಪರೀಕ್ಷೆ ಬರೆದಿದ್ದ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ನೀಡಿದ್ದ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆದು ಇನ್ ಸರ್ವಿಸ್ ಕೋಟಾದಲ್ಲಿ ಆಯ್ಕೆಯಾಗಿದ್ದ. ಸದ್ಯ ಧಾರವಾಡದಲ್ಲಿ ಮೀಸಲು ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿರೋ ಇಸ್ಮಾಯಿಲ್, ರುದ್ರಗೌಡ ಪಾಟೀಲ್ ಸೇರಿ ಆರು ಜನರ ವಿರುದ್ಧ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸಿಐಡಿ ಡಿವೈಎಸ್ಪಿ ಪ್ರಕಾಶ್ ರಾಠೋಡ್ ರಿಂದ ದೂರು ದಾಖಲಾಗಿದೆ. ಕಳೆದ ಒಂದು ವಾರದಿಂದ ಇಸ್ಮಾಯಿಲ್ ಖಾದೀರ್ ನಾಪತ್ತೆಯಾಗಿದ್ದಾನೆ.
ಕಿಂಗ್ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಆಪ್ತರ ಅರೆಸ್ಟ್ ಪ್ರಕರಣದಲ್ಲಿ ಕಿಂಗ್ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಆಪ್ತರನ್ನು ಅರೆಸ್ಟ್ ಮಾಡಲಾಗಿದೆ. ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ಅಸ್ಲಂ ಮುಜಾವರ್ ಹಾಗೂ ಕರಜಗಿ ಗ್ರಾಮದ ಮೂಲದ ಮುನಾಫ್ ಜಮಾದಾರ್ ಬಂಧಿತರು. ಇವರಿಬ್ಬರೂ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಇವರಿಬ್ಬರೂ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್ಗೆ ಭೇಟಿ ಮಾಡಿಸುತ್ತಿದ್ದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:53 am, Fri, 10 June 22