PSI Recruitment Scam: ಜೈಲುಪಾಲಾಗಿದ್ದ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಆಯ್ತು

ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ.

PSI Recruitment Scam: ಜೈಲುಪಾಲಾಗಿದ್ದ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಆಯ್ತು
ದಿವ್ಯಾ ಹಾಗರಗಿ
Follow us
| Updated By: ಆಯೇಷಾ ಬಾನು

Updated on:Jan 05, 2023 | 1:21 PM

ಕಲಬುರಗಿ: ರಾಜ್ಯದಲ್ಲಿ ತೀರ್ವ ಸಂಚಲನ ಮೂಡಿಸಿದ್ದ 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ( PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ(Conditional Bail). ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ. ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. ಎಂಟು ಅಭ್ಯರ್ಥಿಗಳು, ಐವರು ಪರೀಕ್ಷಾ ಮೇಲ್ವಿಚಾರಕಿಯರು, ಮೂವರು ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ನೀಡಲಾಗಿದೆ.

ಘಟನೆ ಹಿನ್ನೆಲೆ

ರಾಜ್ಯದಲ್ಲಿ 2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಆದರೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಬೆಳಕಿಗೆ ಬಂದಿತ್ತು. ಹೀಗಾಗಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು.

ಇದನ್ನೂ ಓದಿ: Bengaluru News: ಕೋರ್ಟ್​​ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಠಾಣೆಯಲ್ಲೇ ಸಾವು

ತನಿಖೆ ಆರಂಭಿಸಿದ್ದ ಸಿಐಡಿ ಪೊಲೀಸರು ಇಲ್ಲಿವರಗೆ 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಇನ್ನು ಈ ಹಿಂದೆ ಆರೋಪಿಗಳು ಅನೇಕ ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಆಗ ಜಾಮಿನು ಸಿಕ್ಕಿರಲಿಲ್ಲಾ. ಕಳೆದ ತಿಂಗಳು ಕಿಂಗ್ ಪಿನ್ ಆರ್ ಡಿ ಪಾಟೀಲ್ ಸೇರಿದಂತೆ ಕೆಲವರಿಗೆ ಜಾಮಿನು ಸಿಕ್ಕಿತ್ತು. ಇದೀಗ ಮತ್ತೆ ಇಪ್ಪತ್ತಾರು ಆರೋಪಿಗಳಿಗೆ ಜಾಮೀನು ದೊರತಿದೆ. ಕಲಬುರಗಿ ಜಿಲ್ಲೆಯಲ್ಲಿ ನಡೆದ ಅಕ್ರಮದಲ್ಲಿ ಬಂಧಿತ 53 ಜನರ ಪೈಕಿ ಇಲ್ಲಿವರಗೆ 36 ಆರೋಪಿಗಳಿಗೆ ಇಲ್ಲಿವರಗೆ ಜಾಮೀನು ದೊರತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:54 pm, Thu, 5 January 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು