AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ
ಕೆಇಎ ಪರೀಕ್ಷಾ ಅಕ್ರಮ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 15, 2023 | 9:29 PM

Share

ಕಲಬುರಗಿ, ನ.15: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ್ ಪರೀಕ್ಷಾ ಮುಖ್ಯಸ್ಥನಾಗಿದ್ದರೆ, ಪರೀಕ್ಷಾ ಕೇಂದ್ರದ ಪ್ರಶ್ನೆಪತ್ರಿಕೆ ಕಸ್ಟೋಡಿಯನ್ ಬಸಣ್ಣ ಪೂಜಾರಿ ಆಗಿದ್ದರು. ಈ ಹಿನ್ನಲೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು  ಕಲಬುರಗಿ CID ಕಚೇರಿಗೆ ಕರೆತಂದಿದ್ದಾರೆ. ಜೊತೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿತ್ತು. ಹೌದು, ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ಇದೀಗ ಇಬ್ಬರು ಉಪನ್ಯಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಪರೀಕ್ಷೆ ಅಕ್ರಮ: ಕಿಂಗ್​ ಪಿನ್ ರುದ್ರಗೌಡನ ಟವರ್ ಲೋಕೆಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ಶಾಕ್

ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ

ಹೌದು, ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್​ ಆರ್​ಡಿ ಪಾಟೀಲ್​ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣವನ್ನು ಇದೀಗ ಸಿಐಡಿಗೆ  ಹಸ್ತಾಂತರವಾಗುತ್ತಿದ್ದಂತೆಯೇ ಬೇಟೆ ಶುರುವಾಗಿದ್ದು, ಇನ್ನೇಷ್ಟು ಆರೋಪಿಗಳನ್ನು ಹೊರ ಬರುತ್ತಾರೋ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​