ಕಲಬುರಗಿ, ನ.15: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ್ ಪರೀಕ್ಷಾ ಮುಖ್ಯಸ್ಥನಾಗಿದ್ದರೆ, ಪರೀಕ್ಷಾ ಕೇಂದ್ರದ ಪ್ರಶ್ನೆಪತ್ರಿಕೆ ಕಸ್ಟೋಡಿಯನ್ ಬಸಣ್ಣ ಪೂಜಾರಿ ಆಗಿದ್ದರು. ಈ ಹಿನ್ನಲೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಕಲಬುರಗಿ CID ಕಚೇರಿಗೆ ಕರೆತಂದಿದ್ದಾರೆ. ಜೊತೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿತ್ತು. ಹೌದು, ಪ್ರಮುಖ ಆರೋಪಿ ಆರ್ಡಿ ಪಾಟೀಲ್ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ಇದೀಗ ಇಬ್ಬರು ಉಪನ್ಯಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಪರೀಕ್ಷೆ ಅಕ್ರಮ: ಕಿಂಗ್ ಪಿನ್ ರುದ್ರಗೌಡನ ಟವರ್ ಲೋಕೆಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ಶಾಕ್
ಹೌದು, ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್ಡಿ ಪಾಟೀಲ್ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ಆರ್ಡಿ ಪಾಟೀಲ್ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣವನ್ನು ಇದೀಗ ಸಿಐಡಿಗೆ ಹಸ್ತಾಂತರವಾಗುತ್ತಿದ್ದಂತೆಯೇ ಬೇಟೆ ಶುರುವಾಗಿದ್ದು, ಇನ್ನೇಷ್ಟು ಆರೋಪಿಗಳನ್ನು ಹೊರ ಬರುತ್ತಾರೋ ಕಾದುನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ