ಕಲಬುರಗಿ, ನ.11; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಕಿಂಗ್ಪಿನ್ ಆರ್ಡಿ ಪಾಟೀಲ್ಗೆ (RD Patil) 2 ನೇ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಪ್ಪಿಸಿ ಆದೇಶಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಸಲೀಂ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಗಳಾದ ಆರ್ಡಿ ಪಾಟೀಲ್, ಸಂತೋಷ್ ಹಾಗೂ ಸಲೀಂ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಮೂರ್ತಿ ಮುಂದೆ ಮುನವಿ ಮಾಡಿದ್ದಾರೆ. ಆದರೆ, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಆದೇಶಿಸಿದ್ದಾರೆ. ಅದರಂತೆ ಮೂವರು ಆರೋಪಿಗಳು ಜೈಲು ಪಾಲಾಗಿದ್ದಾರೆ.
ಇದನ್ನೂ ಓದಿ: ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್ಡಿ ಪಾಟೀಲ್
ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಅಶೋಕನಗರ ಠಾಣಾ ಪೊಲೀಸರು ಪ್ರಮುಖ ಆರೋಪಿ ಆರ್ಡಿ ಪಾಟೀಲ್ನನ್ನು ಸ್ಥಳ ಮಹಜರು ನಡೆಸಿದರು. ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಆರ್ಡಿ ಪಾಟೀಲ್ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ