ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Nov 10, 2023 | 8:21 AM

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ