KEA ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್​ಡಿ ಪಾಟೀಲ್​ 8 ದಿನ ಸಿಐಡಿ ಕಸ್ಟಡಿಗೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್​ ಆರ್​ಡಿ ಪಾಟೀಲ್​ನನ್ನು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

KEA ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್​ಡಿ ಪಾಟೀಲ್​ 8 ದಿನ ಸಿಐಡಿ ಕಸ್ಟಡಿಗೆ
ಆರೋಪಿ ರುದ್ರಗೌಡ ಪಾಟೀಲ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 15, 2023 | 2:15 PM

ಕಲಬುರಗಿ, (ನವೆಂಬರ್ 15): ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್​ ಆರ್​ಡಿ ಪಾಟೀಲ್​ನನ್ನು(RD Patil )8 ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಕೆಇಎ (KEA) ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣ ಪೊಲೀಸರಿಂದ ಹಸ್ತಾಂತರವಾಗುತ್ತಿದ್ದಂತೆಯೇ ಸಿಐಡಿ (CID) ಬೇಟೆ ಶುರು ಮಾಡಿದೆ. ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿದೆ. ಪ್ರಮುಖ ಆರೋಪಿ R​.D.ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಗೆದಷ್ಟು ಬಯಲಾಗುತ್ತಿದೆ ಆರ್​ಡಿ ಪಾಟೀಲ್ ಅಕ್ರಮ; ಕೆಇಎ ಪರೀಕ್ಷೆಯ ಮಾಸ್ಟರ್ ಪ್ಲಾನ್ ಹೇಗಿತ್ತು ಗೊತ್ತಾ?

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಾಲಾಗಿರುವ ಪರೀಕ್ಷೆ ಅಕ್ರಮದ ಕೇಸ್​ಗಳನ್ನು ಪೊಲೀಸ್ ತನಿಕಾಧಿಕಾರಿಗಳು ಈಗಾಗಲೇ ಪ್ರಕರಣ ಫೈಲ್‌ ಗಳನ್ನು ಸಿಐಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ‌. ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:07 pm, Wed, 15 November 23