AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ 3 ಗಂಟೆಯಲ್ಲಿ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸನ್ನೇ ಕದ್ದೊಯ್ದ ಖದೀಮರು!

ನಕಲಿ ಕೀ ಬಳಸಿ, ಬಸನ್ನು ಕದ್ದೋಯ್ದಿದ್ದಾರೆ. ಚಿಂಚೋಳಿಯಿಂದ ತಾಂಡೂರ ಮಾರ್ಗವಾಗಿ ತೆಲೆಂಗಾಣ ರಾಜ್ಯದ ಕಡೆ ತಗೆದುಕೊಂಡು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಬೆಳಗಿನ ಜಾವ 3 ಗಂಟೆಯಲ್ಲಿ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸನ್ನೇ ಕದ್ದೊಯ್ದ ಖದೀಮರು!
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Feb 21, 2023 | 1:02 PM

Share

ಕಲಬುರಗಿ: ರಸ್ತೆಯಲ್ಲಿ ನಿಲ್ಲಿಸಿದ ಬೈಕ್, ಕಾರ್​ಗಳನ್ನು ಕದಿಯುವ ಘಟನೆಗಳು ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ವರದಿಯಾಗುತ್ತವೆ. ಅನೇಕ ಕಡೆ ಗೂಡ್ಸ್ ವಾಹನಗಳನ್ನು ಕೂಡಾ ಕಳ್ಳರು ಕದಿಯುತ್ತಾರೆ. ಆದರೆ ಕಲಬುರಗಿ ಜಿಲ್ಲೆಯಲ್ಲಿ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಬಸನ್ನೇ ಕಳ್ಳರು(Bus Theft) ಕದ್ದೊಯ್ದಿರುವ ಘಟನೆ ನಡೆದೆದೆ.

ಸರ್ಕಾರಿ ಬಸ್ ಕದ್ದೊಯ್ದ ಖದೀಮರು

ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಕೆಆರ್​ಟಿಸಿಗೆ(Kalyana Karnataka Road Transport Corporation) ಸೇರಿದ್ದ ಬಸನ್ನು ಇಂದು(ಫೆ.21) ನಸುಕಿನ ಜಾವ 3.30ರ ಸಮಯದಲ್ಲಿ ಕಳ್ಳರು ಕದ್ದೊಯ್ದಿದ್ದಾರೆ. ಬೀದರ್ ಡಿಪೋ ನಂಬರ್ 2 ಕ್ಕೆ ಸೇರಿದ್ದ ಕೆಎ 38 ಎಫ್ 971 ನಂಬರ್ ನ ಬಸ್, ನಿನ್ನೆ ಬೀದರ್ ನಿಂದ ಚಿಂಚೋಳಿಗೆ ಬಂದಿತ್ತು. ಪ್ರತಿನಿತ್ಯ ಚಿಂಚೋಳಿಯಿಂದ ಮನ್ನಾಎಖ್ಖೆಳ್ಳಿ ಮಾರ್ಗವಾಗಿ ಬೀದರ್ ಮಾರ್ಗದಲ್ಲಿ ಈ ಬಸ್ ಸಂಚರಿಸುತ್ತಿತ್ತು. ಪ್ರತಿನಿತ್ಯ ಚಿಂಚೋಳಿಯಲ್ಲಿ ಹಾಲ್ಟ್ ಮಾಡಿ, ಮುಂಜಾನೆ ಬಸನ್ನು ಚಾಲಕ ಮತ್ತು ನಿರ್ವಾಹಕರು ತೆಗೆದುಕೊಂಡು ಹೋಗುತ್ತಾರೆ. ನಿನ್ನೆ ರಾತ್ರಿ ಬೀದರ್ ನಿಂದ ತಂದಿದ್ದ ಬಸನ್ನು ಚಾಲಕ ಅಯ್ಯುಬ್ ಖಾನ್ ಮತ್ತು ಚಾಲಕ ಈರಪ್ಪ, ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ, ಡಿಪೋದಲ್ಲಿ ಮಲಗಿದ್ದರು. ಇಂದು ಮುಂಜಾನೆ ಎಂದಿನಂತೆ, ಬಸನ್ನು ತಗೆದುಕೊಂಡು ಮತ್ತೆ ಬೀದರ್ ಗೆ ಹೋಗಲು ಮುಂದಾದಾಗ, ಚಾಲಕ ಮತ್ತು ನಿರ್ವಾಹಕನಿಗೆ ಶಾಕ್ ಆಗಿದೆ. ನಿಲ್ದಾಣದಲ್ಲಿದ್ದ ಬಸ್ ನಾಪತ್ತೆಯಾಗಿತ್ತು. ಕೂಡಲೇ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಕಳ್ಳರು ಕದ್ದೊಯ್ದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಮಂಗಳೂರು: ಇಬ್ಬರನ್ನು ಬಲಿಪಡೆದ ಕಾಡಾನೆ ಸೆರೆಗೆ ‘ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ ಶುರು

ನಕಲಿ ಕೀ ಬಳಸಿ ಬಸ್ ಕಳ್ಳತನ

ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಜನರು ಬರ್ತಾರೆ. ಸಾಮಾನ್ಯವಾಗಿ ಸರ್ಕಾರಿ ಬಸ್ ನಿಲ್ದಾಣಕ್ಕೆ ಗೇಟ್ ಗಳು ಕೂಡಾ ಕಡಿಮೆ. ಹಗಲು, ರಾತ್ರಿ ಬಸ್ ಬರುವುದರಿಂದ ಯಾರು ಬರ್ತಾರೆ, ಯಾರು ಹೋಗ್ತಾರೆ ಅನ್ನೋದನ್ನು ಗಮನಿಸೋದಿಲ್ಲಾ. ಇದನ್ನೇ ದುರುಪಯೋಗ ಮಾಡಿಕೊಂಡ ಕಿಲಾಡಿಗಳು, ನಕಲಿ ಕೀ ಬಳಸಿ, ಬಸನ್ನು ಕದ್ದೋಯ್ದಿದ್ದಾರೆ. ಚಿಂಚೋಳಿಯಿಂದ ತಾಂಡೂರ ಮಾರ್ಗವಾಗಿ ತೆಲೆಂಗಾಣ ರಾಜ್ಯದ ಕಡೆ ತಗೆದುಕೊಂಡು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಬಸ್ ಕಳ್ಳತನವಾಗಿರೋ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಇದೀಗ ಬಸನ್ನು ಕದ್ದೋಯ್ದಿರುವ ಆರೋಪಿಗಳ ಬೆನ್ನುಬಿದ್ದಿದ್ದಾರೆ. ಪ್ರಕರಣವನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಗಂಭೀರವಾಗಿ ತಗೆದುಕೊಂಡಿದ್ದು, ಕೂಡಲೇ ಬಸ್ ಪತ್ತೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ.

ವರದಿ: ಸಂಜಯ್ ಚಿಕ್ಕಮಠ, ಟಿವಿ9 ಕಲಬುರಗಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:34 am, Tue, 21 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್