AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ, ಕೋಲಾರದಲ್ಲಿ ಸಿದ್ದರಾಮಯ್ಯನನ್ನು ಸೋಲಿಸಲು ಮಾಹಾ ಪ್ಲಾನ್

ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಡಾ. ಬಿ ಆರ್​ ಅಂಬೇಡ್ಕರ್​ ಅವರ ಮೊಮ್ಮಗ ಪ್ರಕಾಶ್​ ಅಂಬೆಡ್ಕರ್​ ಅವರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ

ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ, ಕೋಲಾರದಲ್ಲಿ ಸಿದ್ದರಾಮಯ್ಯನನ್ನು ಸೋಲಿಸಲು ಮಾಹಾ ಪ್ಲಾನ್
ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Jan 13, 2023 | 3:49 PM

Share

ಕೋಲಾರ: ಕೋಲಾರದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಶತಾಯಗತಾಯ ಸೋಲಿಸಲು ಜೆಡಿಎಸ್​ ಮಾಸ್ಟರ್​ ಪ್ಲಾನ್​​ ಮಾಡಿಕೊಂಡಿದೆ. ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ (JDS) ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumarswamy) ಡಾ. ಬಿ ಆರ್​ ಅಂಬೇಡ್ಕರ್​ (BR Ambedkar) ಅವರ ಮೊಮ್ಮಗ ಪ್ರಕಾಶ್​ ಅಂಬೆಡ್ಕರ್​ ಅವರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಡೆಕ್ಕನ್​ ಹೆರಾಲ್ಡ್​ ವರದಿ ಮಾಡಿದೆ. ಈ ಸಂಬಂಧ ಕೋಲಾರದಲ್ಲಿ ಶೀಘ್ರದಲ್ಲೇ ಜೆಡಿಎಸ್​ ನಾಯಕರು ಸಭೆ ಸೇರಲಿದ್ದಾರೆ. ಸದ್ಯ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿ ಇದ್ದು, ಸಭೆ ಸಂಬಂಧ ಯಾತ್ರೆಯಿಂದ ಬ್ರೆಕ್​ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಅಹಿಂದ ಮತದಾರರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಓಲೈಸಲು ಜೆಡಿಎಸ್​ ಪ್ರಕಾಶ್ ಅವರನ್ನು ಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೊಂದಿಗೆ ಇತ್ತೀಚೆಗೆ ಪ್ರಕಾಶ್ ಅವರನ್ನು ಭೇಟಿ ಮಾಡಿದ್ದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್​ ಅಲ್ಲ, ಸ್ಪರ್ಧಿಸಿದರೆ ಹರಕೆಯ ಕುರಿ ಆಗಲಿದ್ದಾರೆ

ಕಲಬುರಗಿ: ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಕೋಲಾರ ವಿಧಾನಸಭಾ ಕ್ಷೇತ್ರದಿಂದ (Kolar assembly constituency) ಸ್ಪರ್ಧಿಸುವುದಾಗಿ ಈಗಾಗಲೆ ಘೋಷಿಸಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಮಾಜಿ ಮುಖಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumarswamy) ಈ ಹಿಂದೆ ಕೊಂಕು ಮಾತನಾಡಿದ್ದರು. ಈಗ ಮತ್ತೆ ಕಾಲೆಳೆದಿದ್ದು, ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್​ ಅಲ್ಲ. ಕೋಲಾರದಲ್ಲಿ ಸ್ಪರ್ಧಿಸುವಂತೆ ಯಾರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ಕಡಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ದೇವರೇ ಕಾಪಾಡಬೇಕು. ಕಾಂಗ್ರೆಸ್​ ಪಕ್ಷದವರೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ. ನಾನು ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆ ತಿಳಿದುಕೊಂಡಿದ್ದೇನೆ. ಕೋಲಾರ ಜಿಲ್ಲೆಯ ಕಾಂಗ್ರೆಸ್​​​ ನಾಯಕರಿಗೆ ಮತ ಪಡೆಯುವ ಶಕ್ತಿ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹರಕೆಯ ಕುರಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Fri, 13 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು