ಲಿಂಗಾಯತ ಸಮುದಾಯ ಬಿಜೆಪಿ ಆಸ್ತಿಯಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ನಮ್ಮಲ್ಲೂ ಲಿಂಗಾಯತ ಸಮುದಾಯದ ಶಾಸಕರು ಇದ್ದಾರೆ, ನಾಯಕತ್ವ ಗುಣ ಇರುವವರೂ ಇದ್ದಾರೆ. ಈ ಸಮುದಾಯದ ಅನೇಕ ನಾಯಕರು ನಮ್ಮ ಪಕ್ಷ ಸೇರಲು ಮುಂದೆ ಬಂದಿದ್ದಾರೆ. ಈಗಲೇ ಆ ಬಗ್ಗೆ ಹೆಚ್ಚಿನ ವಿವರ ನೀಡುವುದಿಲ್ಲ. ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದರು.

ಲಿಂಗಾಯತ ಸಮುದಾಯ ಬಿಜೆಪಿ ಆಸ್ತಿಯಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್
Follow us
TV9 Web
| Updated By: guruganesh bhat

Updated on: Jul 17, 2021 | 4:32 PM

ಕಲಬುರ್ಗಿ: ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D K Shivakumar) ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು.ಅನ್ಯಪಕ್ಷಗಳ ಬಹಳಷ್ಟು ಮಂದಿ ಲಿಂಗಾಯತ ಸಮುದಾಯದ ( Lingayat Community) ನಾಯಕರು, ಕಾರ್ಯಕರ್ತರು ನಮ್ಮ ಪಕ್ಷದತ್ತ ಮುಖ ಮಾಡಿದ್ದಾರೆ. ನಮ್ಮ ಪಕ್ಷದಲ್ಲಿ ಎಂ.ಬಿ ಪಾಟೀಲ್, ಎಸ್.ಆರ್. ಪಾಟೀಲ್, ಈಶ್ವರ್ ಖಂಡ್ರೆ  ಸೇರಿದಂತೆ ಸಮುದಾಯದ ಅನೇಕ ನಾಯಕರು ಇದ್ದಾರೆ. ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ಅವರ ಆಸ್ತಿ ಎಂದು ಭಾವಿಸಿದ್ದಾರೆ. ಆದರೆ ಅದು ಸತ್ಯ ಅಲ್ಲ. ನಮ್ಮಲ್ಲೂ ಲಿಂಗಾಯತ ಸಮುದಾಯದ ಶಾಸಕರು ಇದ್ದಾರೆ, ನಾಯಕತ್ವ ಗುಣ ಇರುವವರೂ ಇದ್ದಾರೆ. ಈ ಸಮುದಾಯದ ಅನೇಕ ನಾಯಕರು ನಮ್ಮ ಪಕ್ಷ ಸೇರಲು ಮುಂದೆ ಬಂದಿದ್ದಾರೆ. ಈಗಲೇ ಆ ಬಗ್ಗೆ ಹೆಚ್ಚಿನ ವಿವರ ನೀಡುವುದಿಲ್ಲ. ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದರು.

ಸಾಂಪ್ರದಾಯಿಕ ವೃತ್ತಿ ಅವಲಂಬಿತರ ಹಿತ ಕಾಯಲು ಸಂವಾದ ಈ ಭಾಗದಲ್ಲಿ ಮಳೆ ಆಗುತ್ತಿದ್ದು ರೈತರಲ್ಲಿ ಸಂತಸವಿದೆ. ಇಂದು ಮತ್ತು ನಾಳೆ ಬಿಜಾಪುರ, ಬಾಗಲಕೋಟೆಯಲ್ಲಿ ಬಂಜಾರ ಸಮಾಜದ ತಾಂಡಾಗಳಿಗೆ ಭೇಟಿ ನೀಡುತ್ತೇನೆ. ಇದರ ಜತೆಗೆ ನೇಕಾರರು ಹಾಗೂ ದಲಿತ ಸಮುದಾಯದ ಸಮಸ್ಯೆಗಳ ಬಗ್ಗೆಯೂ ತಿಳಿದುಕೊಳ್ಳುತ್ತೇನೆ. ಕೊವಿಡ್ ಸಮಯದಲ್ಲಿ ಅವರಿಗೆ ಆಗಿರುವ ತೊಂದರೆಗಳೇನು, ಮುಂದೆ ನಾವೇನು ಮಾಡಬಹುದು? ಅವರಿಗೆ ಯಾವ ರೀತಿ ಕಾರ್ಯಕ್ರಮ ರೂಪಿಸಬಹುದು? ಅವರ ಬೇಡಿಕೆ ಏನು? ಅವರ ರಕ್ಷಣೆ ಹೇಗೆ ಮಾಡಬೇಕು ಎಂಬುದರ ಬಗ್ಗೆ ಅರಿಯಬೇಕಿದೆ. ಹೀಗಾಗಿ ಅವರ ಸಮಸ್ಯೆಗಳನ್ನು ಕಣ್ಣಾರೆ ಕಂಡು, ಕಿವಿಯಾರೆ ಕೇಳಲು ಅವರ ಜತೆ ಖುದ್ದಾಗಿ ಸಂವಾದ, ಚರ್ಚೆ ಮಾಡಲು ಬಂದಿದ್ದೇನೆ.ನಾನು ಈಗಾಗಲೇ ಕರಾವಳಿ ಭಾಗದ ಮೀನುಗಾರರನ್ನು ಭೇಟಿ ಮಾಡಿದ್ದು, ಅವರ ಸಮಸ್ಯೆಗಳು ಭೀಕರವಾಗಿವೆ. ಒಬ್ಬ ಮೀನುಗಾರ 10 ಜನರಿಗೆ ಉದ್ಯೋಗ ಹಾಗೂ ಅನ್ನ ನೀಡಲು ಜೀವ ಪಣಕ್ಕಿಟ್ಟು ಶ್ರಮಿಸುತ್ತಿದ್ದಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಮುಂದೆ ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವ ವಿವಿಧ ಸಮುದಾಯಗಳನ್ನು ಭೇಟಿ ಮಾಡಲಿದ್ದೇನೆ. ಇವರು ತಮ್ಮ ವೃತ್ತಿ ಉಳಿಸಿಕೊಂಡು ನಮ್ಮ ಸಮಾಜಕ್ಕೆ ಶಕ್ತಿಯಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ಪಕ್ಷದ ಕಾರ್ಯಕ್ರಮ ರೂಪಿಸಲು ಅವರ ಅಭಿಪ್ರಾಯ ಸಂಗ್ರಹಿಸಬೇಕಿದೆ. ಸದ್ಯ ಚುನಾವಣೆ ಇಲ್ಲ. ಆದರೆ ಕೊವಿಡ್​ನಿಂದಾಗಿ ರಾಜಕೀಯ ಸಭೆ-ಸಮಾರಂಭಗಳಿಗೆ ನಿರ್ಬಂಧ ಹಾಕಿದ್ದಾರೆ. ಕೊವಿಡ್​ನಿಂದ ಅನೇಕರು ಸತ್ತಿದ್ದಾರೆ. ಅನೇಕರಿಗೆ ಪರಿಹಾರ ಕೊಡಿ ಎಂದು ಆಗ್ರಹಿಸಲಾಗಿದ್ದರೂ, ಅದು ಯಾರಿಗೂ ತಲುಪಿಲ್ಲ. ಇಂತಹ ವಿಚಾರದಲ್ಲಿ ಜನರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಲು ನಾವು ಕಾರ್ಯಕರ್ತರಿಗೆ ಹೇಳಿದ್ದೇವೆ. ಎಲ್ಲರಿಗೂ ಉಚಿತ ಲಸಿಕೆ ನೀಡುತ್ತಿದ್ದೇವೆ ಎಂದು ಸರಕಾರ ಎಲ್ಲ ಕಡೆ ಪ್ರಚಾರ ಪಡೆಯುತ್ತಿದೆ. ಆದರೆ ಎಲ್ಲೂ ಲಸಿಕೆ ಸಿಗುತ್ತಿಲ್ಲ. ಹೀಗಾಗಿ ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಬೆಂಗಳೂರಿಗೆ ವಿಶೇಷ ಕಾರ್ಯಕ್ರಮ ಬೇಕು ಬೆಂಗಳೂರು ರಾಜ್ಯದ ಹೃದಯ ಭಾಗ. ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮಾಡಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಂಗಳೂರಿನ ಹಿತ ಹಾಗೂ ಅಭಿವೃದ್ಧಿಗೆ ಏನು ಮಾಡಬೇಕು ಎಂದು ಅಲ್ಲಿನ ನಾಯಕರ ಜತೆ ಚರ್ಚಿಸಿದ್ದೇವೆ. ಬೆಂಗಳೂರಿಗಾಗಿ ಪ್ರತ್ಯೇಕ ಹಾಗೂ ಆಕರ್ಷಕ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: 

ಅವನು ನನ್ನ ಸಂಬಂಧಿ; ಕಾರ್ಯಕರ್ತನಿಗೆ ಕಪಾಳಮೋಕ್ಷ ಘಟನೆಗೆ ಅಂತ್ಯ ಹಾಡಲು ಯತ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಸಿಎಂ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್​ಗೆ ತರಲು ಯತ್ನ: ಮಾಜಿ ಸಚಿವ ಎಂ ಬಿ ಪಾಟೀಲ್

(KPCC President DK Shivakumar says Lingayat community is not BJP property)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್