ಕೊವಿಡ್ ಸಮಯದಲ್ಲಿ ಸಾರಿಗೆ ನೌಕರರ ಮುಷ್ಕರ ಸರಿಯಲ್ಲ: ಸಚಿವ ಲಕ್ಷ್ಮಣ ಸವದಿ

ಕೊವಿಡ್ ಸಮಯದಲ್ಲಿ ಮುಷ್ಕರ ಸರಿಯಲ್ಲ ಎಂದು ತಿಳಿಸಿರುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

  • TV9 Web Team
  • Published On - 11:01 AM, 6 Apr 2021
ಕೊವಿಡ್ ಸಮಯದಲ್ಲಿ ಸಾರಿಗೆ ನೌಕರರ ಮುಷ್ಕರ ಸರಿಯಲ್ಲ: ಸಚಿವ ಲಕ್ಷ್ಮಣ ಸವದಿ
ಸಚಿವ ಲಕ್ಷ್ಮಣ ಸವದಿ

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಒಳ್ಳೆಯದಲ್ಲ ಕೈ ಬಿಡಿ ಅಂತಾ ಹೇಳಿದ್ದೇನೆ. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಭರವಸೆ ನೀಡಲು ಬರೋದಿಲ್ಲ. ಮೇ ನಾಲ್ಕರವರಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಸದ್ಯ ಇದನ್ನು ಮುಂದಕ್ಕೆ ಹಾಕಬೇಕು. ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಎಲ್ಲರನ್ನು ಕರೆದು ಮಾತನಾಡಿದ್ದೇನೆ. ಇಂದು ಕಾರ್ಮಿಕ ನಾಯಕರ ಜೊತೆ ಮೀಟಿಂಗ್ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಬೇಕಿದೆ. ಮಧ್ಯಾಹ್ನದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸರ್ಕಾರದ ವಿರುದ್ಧ ಯತ್ನಾಳ ಸೇರಿದಂತೆ ಕೆಲವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಇರುವ ಸಣ್ಣಪುಟ್ಟ ಗೊಂದಲಗಳನ್ನು ಮತ್ತು ಅಸಮಾಧಾನಗಳನ್ನು ವರಿಷ್ಠರು ಸರಿಪಡಿಸುತ್ತಾರೆ. ಕಾಂಗ್ರೆಸ್​ ಕೂಡಾ ಮನೆಯೊಂದು ಮೂರು ಬಾಗಿಲು ಅಂತಾಗಿದೆ. ಯತ್ನಾಳರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಅದು ಅವರ ವೈಯ್ಯಕ್ತಿಕ ಹೇಳಿಕೆ  ಎಂದು ಹೇಳಿದ್ದಾರೆ.

ಇಂದು ಮಧ್ಯಾಹ್ನದಿಂದಲೇ ಬಸ್​ ಬಂದ್​ ಆಗುವ ಸಾಧ್ಯತೆ
ಸಾರಿಗೆ ನೌಕರರು ಇದೀಗ ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಪರಿಣಾಮ ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ನಡೆಸುವುದು ಅನುಮಾನವಾಗಿದೆ. 6ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿಯಲಿರುವ ಸಾರಿಗೆ ನೌಕರರು ಅನಿರ್ದಿಷ್ಟ ಚಳುವಳಿಗೆ ಸಜ್ಜಾಗಿದ್ದಾರೆ. BMTC, KSRTC, NWKRTC, NEKRTC ಸಿಬ್ಬಂದಿ ಕುಟುಂಬ ಸಮೇತರಾಗಿ ಮುಷ್ಕರದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ.

ಮುಷ್ಕರದಿಂದ ಜನ ಸಾಮಾನ್ಯರಿಗೆ ತೊಂದರೆಯಾಗಲಿದೆ ಎಂಬ ಮಾತಿಗೆ ಪ್ರತ್ಯುತ್ತರಿಸಿರುವ ಸಾರಿಗೆ ಸಿಬ್ಬಂದಿ, ಟಿವಿ9 ಪ್ರತಿನಿಧಿಯ ಬಳಿ ತಮ್ಮ ಅಳಲು ತೋಡಿಕೊಂಡು ಬಸ್​ ನಿಲ್ಲಿಸಿದರೆ ಜನರಿಗೆ ತೊಂದರೆ ಎಂದು ಹೇಳ್ತಾರೆ. ಆದರೆ, 6 ಸಾವಿರ ಸಂಬಳದಲ್ಲಿ ನಾವು ಜೀವನ ಸಾಗಿಸುವುದು ಹೇಗೆ? ನಮ್ಮ ಸಮಸ್ಯೆಯನ್ನು ನೋಡುವವರು ಯಾರು? ಬೆಂಗಳೂರಿನಲ್ಲಿ ನಾವು ಜೀವನ ಸಾಗಿಸುವುದು ಕಷ್ಟವಾಗುತ್ತಿದೆ. ನಮಗಾಗುವ ತೊಂದರೆ ಯಾರಿಗೂ ಕಾಣಿಸುತ್ತಿಲ್ಲವಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ