ಕಲಬುರಗಿ: ಕಿರುಕುಳಕ್ಕೆ ಬೇಸತ್ತು ಕೆಎಸ್​ಆರ್​ಟಿಸಿ ನೌಕರ ಆತ್ಮಹತ್ಯೆಗೆ ಯತ್ನ

ಕೆಎಸ್​ಆರ್​ಟಿಸಿಯಲ್ಲಿ ನೌಕರರಿಗೆ ಕಿರುಕುಳ ಇನ್ನೂ ತಪ್ಪಿಲ್ಲ. ಮೇಲಧಿಕಾರಿಯ ಕಿರುಕುಳಕ್ಕೆ ಬೇಸತ್ತ ಕೆಎಸ್​ಆರ್​ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಕಲಬುರಗಿ: ಕಿರುಕುಳಕ್ಕೆ ಬೇಸತ್ತು ಕೆಎಸ್​ಆರ್​ಟಿಸಿ ನೌಕರ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​ಆರ್​ಟಿಸಿ ಬಸ್ ಚಾಲಕ ಕಂ ನಿರ್ವಾಹಕ
Follow us
| Updated By: Rakesh Nayak Manchi

Updated on:Jul 14, 2023 | 3:46 PM

ಕಲಬುರಗಿ, ಜುಲೈ 14: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಎಸ್​ಆರ್​ಟಿಸಿ (KSRTC) ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Suicide) ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ. ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಸರಿಯಾಗಿ ಡ್ಯೂಟಿ ನೀಡುತ್ತಿಲ್ಲ. ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣಾ ಅವರು ಆರೋಪಿಸಿದ್ದಾರೆ. ಅಲ್ಲದೆ, ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೇಲ್ ಸುರಿದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ, ಅನಾಹುತವನ್ನು ತಡೆದಿದ್ದಾರೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಸಚಿವ ಚಲುವರಾಯಸ್ವಾಮಿ ವಿಷಯಾಂತರ ಮಾಡುತ್ತಿದ್ದಾರೆಂದ ಸುರೇಶ್ ​ಗೌಡ

ಇತ್ತೀಚೆಗಷ್ಟೇ, ವರ್ಗಾವಣೆಗೆ ಮನನೊಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್ ಎಂಬವರು ಡಿಪೋ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಕರಣದಲ್ಲಿ ಸಚಿವ ಚಲುವರಾಯಸ್ವಾಮಿ ಹೆಸರು ಕೇಳಿಬಂದಿದ್ದು, ಈ ಪ್ರಕರಣ ರಾಜಕೀಯ ತಿರುವು ಕೂಡ ಪಡೆದುಕೊಂಡು ಭಾರೀ ಟೀಕೆಗಳಿಗೆ ಕಾರಣವಾಗುತ್ತಿದೆ. ಸರ್ಕಾರ ಮತ್ತು ವಿಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ.

ಇದಕ್ಕೂ ಮುನ್ನ ಹಾವೇರಿಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋ ಆವರಣದಲ್ಲಿ ಮಲ್ಲನಗೌಡ ಬಡಗೇರ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಆತ್ಮಹತ್ಯೆಗೆ ನಿಕರವಾದ ಕಾರಣ ತಿಳಿದುಬಂದಿಲ್ಲ. ಮೇಲಧಿಕಾರಿಗಳ ಕಿರುಕುಳ ಆರೋಪ ಸಂಬಂಧ ಅನೇಕ ಬಾರಿ ಪ್ರತಿಭಟನೆಗಳು ಕೂಡ ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Fri, 14 July 23