ಭೂಮಿ ದುರ್ಬಳಕೆ ಆರೋಪ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರನ ವಿರುದ್ಧ ದೂರು ದಾಖಲು
Mallikarjun Kharge: ಜಿಲ್ಲಾಡಳಿತ ನೀಡಿದ್ದ ಭೂಮಿ ದುರ್ಬಳಕೆ ಮಾಡಿಕೊಂಡ ಆರೋಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರನೂ ಆಗಿರುವ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದೆ.
ಕಲಬುರಗಿ: ಜಿಲ್ಲಾಡಳಿತ ನೀಡಿದ್ದ ಭೂಮಿ ದುರ್ಬಳಕೆ ಮಾಡಿಕೊಂಡ ಆರೋಪ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಮತ್ತು ಅವರ ಪುತ್ರನೂ ಆಗಿರುವ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಲೋಕಾಯುಕ್ತ (Lokayukta) ಕಚೇರಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ನೀಡಿದ ದೂರಿನ ಅನ್ವಯ ಕಾಂಗ್ರೆಸ್ನ ಇಬ್ಬರು ನಾಯಕರ ವಿರುದ್ಧ ದೂರು ದಾಖಲಾಗಿದೆ.
ಅಂಬೇಡ್ಕರ್ ಸ್ಮಾರಕ ಸಮೀತಿಗೆ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 1981ರಲ್ಲಿ ಕಲಬುರಗಿ ಜಿಲ್ಲಾಡಳಿತವು 36 ಸಾವಿರ ಚದರ್ ಅಡಿ ಭೂಮಿ ನೀಡಿತ್ತು. ಆದರೆ ಕಳೆದ ಕೆಲ ವರ್ಷಗಳಿಂದ ಕಲ್ಯಾಣ ಮಂಟಪ ಸಾರ್ವಜನಿಕ ಬಳಕೆಗೆ ನೀಡದೆ ಅಲ್ಲಿ ಕರ್ನಾಟಕ ಪಿಪಲ್ಸ್ ಎಜುಕೇಶನ್ ಸೊಸೈಟಿ ಕಚೇರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪೀಪಿಲ್ಸ್ ಎಜುಕೇಶನ್ ಸೊಸೈಟಿಯ ಸ್ಥಾಪಕ ಅಧ್ಯಕ್ಷರಾಗಿದ್ದರು. ಸದ್ಯ ಅವರು ಸೊಸೈಟಿಯಲ್ಲಿ ಯಾವುದೇ ಹುದ್ದೆ ಹೊಂದಿಲ್ಲ. ಆದರೆ ಇವರ ಮಗನಾಗಿರುವ ಪ್ರಿಯಾಂಕ್ ಖರ್ಗೆ ಅದರ ಸದಸ್ಯರಾಗಿದ್ದಾರೆ. ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಮಣಿಕಂಠ ರಾಠೋಡ್ ಅವರು ಆರೋಪಿಸಿ ಕಲಬುರಗಿ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:41 am, Mon, 26 December 22