ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ತಂದೆ-ಮಗ ಸಿಡಿಲಿಗೆ ಬಲಿ

ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ತಂದೆ-ಮಗ ಸಿಡಿಲಿಗೆ ಬಲಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 12, 2022 | 8:50 PM

ಕಲಬುರಗಿ: ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ. ಸೇಡಂ ತಾಲೂಕಿನ ಪಿಲ್ಲಿಗುಂಟಾ ತಾಂಡಾ ನಿವಾಸಿಗಳಾದ ತುಳಚಾ ರಾಠೋಡ್(40), ಅವೀನ್ ರಾಠೋಡ್(16) ಮೃತ ದುರ್ದೈವಿಗಳು. ತಂದೆ-ಮಗ ಕೂಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮರಣ ಹೊಂದಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿಡಿಲು ಬಡಿದು ಯುವಕ ಸಾವು

ಬಾಗಲಕೋಟೆ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಮುಧೋಳ ತಾಲ್ಲೂಕಿನ ವರ್ಚಗಲ್ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗುಡದನ್ನವರ(೩೦) ಮೃತ ಯುವಕ. ಕೃಷ್ಣಪ್ಪ ಗುಡದನ್ನವರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಲೋಕಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ನಾಲ್ಕು ಮೇಕೆಗಳು ಸಾವು: ಸಿಡಿಲು ಬಡಿದು ನಾಲ್ಕು ಮೇಕೆಗಳು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲ್ಲೂಕಿನ ಆಡಗಲ್ ಗ್ರಾಮದಲ್ಲಿ ನಡೆದಿದೆ. ಮಂಜಪ್ಪ ಗಚ್ಚಪ್ಪ ಕರಡಿ ಮೇಕೆ ಮೆಯಿಸಲು ಗುಡ್ಡಕ್ಕೆ ಹೋಗಿದ್ದರು. ಒಟ್ಟು ೩೦ ಕ್ಕೂ ಹೆಚ್ಚು ಮೇಕೆ, ಕುರಿಗಳನ್ನು ಮೇಯಿಸೋಕೆ ಹೋಗಿದ್ದ ವೇಳೆ ಸಂಜೆ 4 ಕ್ಕೆ ಸಿಡಿಲು ಬಡಿದು ಸಾವನ್ನಪ್ಪಿವೆ.

ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳಗಾವಿ: ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಸಂಜಯ್ ಪಾಟೀಲ್(35) ಮೃತ ದುರ್ದೈವಿ. ಸಂಜಯ್ ಪಾಟೀಲ್ ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಮಾಡಿಕಳ್ಳಲು ನಿರ್ಧರಿಸಿದ್ದಾನೆ. ಹೀಗಾಗಿ ಟವರ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಪ್ರವಹಿಸಿ ಕುದುರೆ ಸಾವು

ರಾಮನಗರ: ವಿದ್ಯುತ್ ಪ್ರವಹಿಸಿ ಕುದುರೆ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ನಗರದ‌ ಕುವೆಂಪು‌ನಗರದಲ್ಲಿ ನಡೆದಿದೆ. ಟ್ರಾನ್ಸ್ ಫಾರ್ಮರ್ ನಿಂದ ವಿದ್ಯುತ್ ಪ್ರವಹಿಸಿ ಕುದುರೆ ಸಾವನ್ನಪ್ಪಿದ್ದು, ಬೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಕ್‌‌ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ: ಮಹಿಳೆ ಸಾವು

ವಿಜಯಪುರ: ಬೈಕ್‌‌ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಮುತ್ತವ್ವ ಗಸ್ತಿ (40) ಮೃತ ಮಹಿಳೆ. ಅಪಘಾತದ ಬಳಿಕ ಬಸ್ ಬಿಟ್ಟು ಕಂಡಕ್ಟರ್, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಬಲೇಶ್ವರ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:49 pm, Wed, 12 October 22