AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇವರ್ಗಿ ಬಳಿ ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

ಜೇವರ್ಗಿ ಬಳಿ ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ
ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ
TV9 Web
| Edited By: ಆಯೇಷಾ ಬಾನು|

Updated on:Jan 09, 2023 | 1:07 PM

Share

ಕಲಬುರಗಿ: ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ ಹೊಡೆದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ನಡೆದಿದೆ. ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯದ ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಲಬುರಗಿ ನಗರದಿಂದ ಜೇವರ್ಗಿ ಪಟ್ಟಣಕ್ಕೆ ತೆರಳುತ್ತಿದ್ದ ನಗರದ ಗೋದಮಿನಿಂದ ವೈನ್‌ಶಾಪ್‌ಗಳಿಗೆ ಸರಬರಾಜು ಆಗುತ್ತಿದ್ದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ 1 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 1 ವಾರದಲ್ಲಿ ಮಸೀದಿ ನೆಲಸಮ ಮಾಡ್ಬೇಕು, ಇಲ್ಲದಿದ್ರೆ ಶ್ರೀರಾಮಸೇನೆ ನುಗ್ಗುತ್ತೆ: ಬೆಳಗಾವಿ ಪಾಲಿಕೆ ಆಯುಕ್ತರಿಗೆ ಮುತಾಲಿಕ್ ಎಚ್ಚರಿಕೆ

ಪೂಜಾ ಸಾಮಗ್ರಿ ಗೋಡೌನ್​​ನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋಡೌನ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 11.30ಕ್ಕೆ ಕಟ್ಟಡದ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗೋಡೌನ್​​ನಲ್ಲಿದ್ದ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ. 35 ಅಗ್ನಿಶಾಮಕ ಸಿಬ್ಬಂದಿ ಸತತ 3 ಗಂಟೆಗಳ ನಿರಂತರ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ​ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಗೋಡೌನ್ ಒಳಭಾಗದಲ್ಲಿದ್ದ ಕರ್ಪೂರ, ಊದಿನ ಕಡ್ಡಿ, ದೀಪದ ಎಣ್ಣೆ ಮತ್ತು ಇತರೆ ಪೂಜಾ ಸಾಮಾಗ್ರಿಗಳಿಗೆ ಬೆಂಕಿ ಹೊತ್ತಿದ್ದರಿಂದ ಬೆಂಕಿ ಹಾರಿಸಲು ಅಗ್ನಿಶಾಮಕ ಸಿಬ್ಬಂದಿ ‌ಹರಸಾಹಸಪಡುವಂತಾಯಿತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Mon, 9 January 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು