Kalaburagi News: ಮಾರಕಾಸ್ತ್ರದಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರ ಹತ್ಯೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2023 | 12:38 PM

ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಇನ್ನೊಂದೆಡೆ ಬೆಂಗಳೂರಿನ ಪಾರ್ಕ್​ವೊಂದರಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಎರಡು ಸುದ್ದಿ ವಿವರ ಈ ಕೆಳಗಿನಂತಿದೆ.

Kalaburagi News: ಮಾರಕಾಸ್ತ್ರದಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರ ಹತ್ಯೆ
Follow us on

ಕಲಬುರಗಿ, (ಅಕ್ಟೋಬರ್ 13): ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ( Gram panchayat President) ಕೊಚ್ಚಿ ಬರ್ಬರವಾಗಿ ಹತ್ಯೆ(Murder) ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಎನ್ನುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಗೌಡಪ್ಪಗೌಡ, ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯಾಗಿದ್ದು. ಹಳೇ ವೈಷಮ್ಯ ಹಿನ್ನೆಲೆ ಗೌಡಪ್ಪಗೌಡನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಯ, ಪೊಲೀಸರು ತನಿಖೆ ನಡೆಸಿದ್ದಾರೆ.

ಪಾರ್ಕ್​​ನಲ್ಲಿ ಯುವಕ ಆತ್ಮಹತ್ಯೆಗೆ

ಬೆಂಗಳೂರು: ಬೆಂಗಳೂರಿನ ಆರ್​.ಆರ್​.ನಗರ ಠಾಣಾ ವ್ಯಾಪ್ತಿಯಲ್ಲಿರುವ ಪಾರ್ಕ್​​ನಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಾರ್ಕ್ ನ ಕುಟೀರದ ಕಂಬಕ್ಕೆ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಯುವಕ ಯಾರು? ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ:  ಶಿಕ್ಷಕ ಅರೆಸ್ಟ್

ತುಮಕೂರು: ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಬಂಧಿಸಿದಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಸರ್ಕಾರಿ ಫ್ರೌಢಶಾಲೆಯ ಸಹ ಶಿಕ್ಷಕ ಪಿ.ನಾಗಭೂಷಣ್ ಎನ್ನುವರನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿಂದೆ ಮಧುಗಿರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ನಾಹಭೂಷಣ್ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣದಡಿ ದೂರು ದಾಖಲಿಸಿದ್ದರು. ಇದೇ ಆರೋಪದಲ್ಲಿ ನಾಹಭೂಷಣ್ ಅವರನ್ನು ಅಮಾನತು ಮಾಡಿ ಪಾವಗಡ ತಾಲ್ಲೂಕಿನ ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು‌. ಬಳಿಕ ನಾಗಭೂಷಣ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ವಿಚಾರಣೆ ಕಾಯ್ದಿರಿಸಿನಾಹಭೂಷಣ್ ನನ್ನು ಅಮಾನತು ಮಾಡಿ ಮಧುಗಿರಿ ಡಿಡಿಪಿಐ ಎಂ.ಆರ್. ಮಂಜುನಾಥ್ ಆದೇಶಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ