AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮಹಾಶಿವರಾತ್ರಿ ಹಿನ್ನೆಲೆ ಮತ್ತೆ ಮುನ್ನಲೆಗೆ ಬಂದ ಲಾಡ್ಲೆ ಮಶಾಕ್​ ದರ್ಗಾ ರಾಘವಚೈತನ್ಯ ಶಿವಲಿಂಗ ಪೂಜೆ

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಬಳಿಯ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವಚೈತನ್ಯ ಶಿವಲಿಂಗದ ಪೂಜೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಿವೆ. ಶಾಂತಿ, ಸುವ್ಯವಸ್ಥೆ ನಿಟ್ಟಿನಲ್ಲಿ ಆಳಂದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕಲಬುರಗಿ: ಮಹಾಶಿವರಾತ್ರಿ ಹಿನ್ನೆಲೆ ಮತ್ತೆ ಮುನ್ನಲೆಗೆ ಬಂದ ಲಾಡ್ಲೆ ಮಶಾಕ್​ ದರ್ಗಾ ರಾಘವಚೈತನ್ಯ ಶಿವಲಿಂಗ ಪೂಜೆ
ಲಾಡ್ಲೆ ಮಶಾಕ್​ ದರ್ಗಾ
TV9 Web
| Edited By: |

Updated on:Feb 25, 2025 | 10:34 AM

Share

ಕಲಬುರಗಿ, ಫೆಬ್ರವರಿ 25: ಮಹಾಶಿವರಾತ್ರಿ (Mahashivratri) ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ (Aland) ಬಳಿಯ ಲಾಡ್ಲೆ ಮಶಾಕ್​ ದರ್ಗಾದಲ್ಲಿರುವ (Ladle mashak dargah) ರಾಘವಚೈತನ್ಯ ಶಿವಲಿಂಗದ (Raghava Chaitanya Shivalinga) ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆ ಮುಖಂಡರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇನ್ನು, ಮುಂಜಾಗ್ರತಾ ಕ್ರಮವಾಗಿ ಆಳಂದ ತಾಲೂಕಿನಲ್ಲಿ ಮದ್ಯ ಮಾರಾಟವನ್ನು ಮಂಗಳವಾರ (ಫೆ.25) ರಾತ್ರಿ 11 ಗಂಟೆಯಿಂದ ಫೆ.27ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಲಾಡ್ಲೆ ಮಶಾಕ್ ದರ್ಗಾ ಶಿವಲಿಂಗ ವಿವಾದ

2022 ರಲ್ಲಿ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯ ಶಿವಲಿಂಗದ ಮೇಲೆ ಕಿಡಿಗೇಡಿಗಳು ಮಲಮೂತ್ರ ಮಾಡಿ ಅಪಮಾನ ಮಾಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಶಿವಲಿಂಗ ಶುದ್ಧೀಕರಣಕ್ಕೆ ತೆರಳಿದ್ದರು. ಈ ವೇಳೆ ಅನ್ಯ ಸಮುದಾಯದ ಜನ ಶಿವಲಿಂಗ ಶುದ್ಧೀಕರಣ ಮಾಡಿ ಹೊರಬರುತ್ತಿದ್ದವರ ಮೇಲೆ ಏಕಾಏಕಿ ಮಾರಕಾಸ್ತ್ರಗಳು, ಬಡಿಗೆ ಹಿಡಿದು ಕಲ್ಲು ತೂರಾಟ ನಡೆಸಿದ್ದರು.

ಇದನ್ನೂ ಓದಿ: ಮಹಾಶಿವರಾತ್ರಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ, ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ

ಶ್ರೀ ರಾಘವ ಚೈತನ್ಯ ಶಿವಲಿಂಗ ಇತಿಹಾಸ

ಆಳಂದ ಪಟ್ಟಣದಲ್ಲಿ ಸುಪ್ರಸಿದ್ದ ಸೂಪಿ ಸಂತ ಲಾಡ್ಲೆ ಮಶಾಕ್ ದರ್ಗಾವಿದೆ. 14ನೇ ಶತಮಾನದಲ್ಲಿ ತತ್ವ ವಿಚಾರಗಳಿಂದ ಲಾಡ್ಲೆ ಮಶಾಕ್ ಸುಪ್ರಸಿದ್ದಿಯನ್ನು ಹೊಂದಿದ್ದರು. ಇದೇ ದರ್ಗಾದ ಆವರಣದಲ್ಲಿ, 15ನೇ ಶತಮಾನದಲ್ಲಿ ಆಗಿಹೋಗಿರುವ ಶಿವಾಜಿ ಮಹಾರಾಜರ ಗುರು, ಸಂತ ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿಯಿದೆ. ಸಮಾಧಿ ಮೇಲೆ ಶಿವಲಿಂಗವಿದೆ. ದರ್ಗಾಕ್ಕೆ ಹೋಗುತ್ತಿದ್ದ ಅನೇಕ ಹಿಂದೂ ಭಕ್ತರು, ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜಿಸಿ, ನಮಸ್ಕರಿಸಿ ಬರುತ್ತಿದ್ದರು. ಜೊತೆಗೆ ಜೋಶಿ ಎಂಬ ಕುಟುಂಬದವರು ಲಿಂಗಕ್ಕೆ ಪ್ರತಿದಿನ ಪೂಜೆ ಸಲ್ಲಿಸುತ್ತಿದ್ದರು. ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಕೂಡ ಇತ್ತು. ಆದರೆ, 2022ರಲ್ಲಿ ಶಿವಲಿಂಗದ ಮೇಲೆ ಅನ್ಯ ಕೋಮಿನ ಕೆಲವರು ಮಲಮೂತ್ರ ಮಾಡಿದ್ದರು. ಅಂದಿನಿಂದ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Tue, 25 February 25