ಮಲ್ಲಿಕಾರ್ಜುನ ಖರ್ಗೆ ಪರಮಾಪ್ತ, ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ಅವರು ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಇಕ್ಬಾಲ್ ಅಹ್ಮದ್ ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ.ಧರ್ಮಸಿಂಗ್ ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಮಲ್ಲಿಕಾರ್ಜುನ ಖರ್ಗೆ ಪರಮಾಪ್ತ, ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ
ಇಕ್ಬಾಲ್​ ಅಹ್ಮದ್ ಸರಡಗಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು

Updated on: May 22, 2024 | 8:48 AM

ಕಲಬುರಗಿ, ಮೇ.22: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ(81) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ (Iqbal Ahmed Saradgi) ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಕ್ಬಾಲ್ ಅವರು ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004 ರಲ್ಲಿ 2 ಬಾರಿ ಸಂಸದ, 1 ಬಾರಿ ಎಂಎಲ್​ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಸಂಜೆ 6 ಗಂಟೆಗೆ ಕಲಬುರಗಿಯಲ್ಲಿ ಇಕ್ಬಾಲ್​ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ. ಸರಡಗಿ ನಿಧನಕ್ಕೆ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಡಿವೈಎಸ್​ಪಿ ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿದ ಖದೀಮರು; ಬರೋಬ್ಬರಿ 15,98,761 ರೂ. ವರ್ಗಾವಣೆ

ಕಲಬುರಗಿ ನಗರದಲ್ಲಿ 1944 ಜೂನ್ 5ರಂದು ಜನಿಸಿದ ಇಕ್ಬಾಲ್​ ಅಹ್ಮದ್ ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.ಎಲ್‌ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ತೀವ್ರ ಆರೋಗ್ಯ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ಬಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆ ಉಸಿರೆಳೆದಿದ್ದಾರೆ.

ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ನಿವಾಸದಲ್ಲಿ ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 6ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ಹಲವು ತಿಂಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅಲ್ಲದೆ ಕಳೆದ ಎರಡು ವರ್ಷದಿಂದ ಸಕ್ರೀಯ ರಾಜಕಾರಣದಿಂದ ದೂರವಾಗಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ