AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೇ ಕ್ರಮ ಕೈಗೊಂಡ್ರೂ ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್ ಉಗ್ರ ದಾಳಿ ಸಂಬಂಧ ದೇಶದ ಏಕತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರಗಳಿಗೆ ತಮ್ಮ ಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೇ ಕ್ರಮ ಕೈಗೊಂಡ್ರೂ ಬೆಂಬಲ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆImage Credit source: PTI
TV9 Web
| Updated By: Ganapathi Sharma|

Updated on: May 03, 2025 | 4:15 PM

Share

ಕಲಬುರಗಿ, ಮೇ 3: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun harge) ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶಕ್ಕಾಗಿ ಏನೇ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೇವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು.

ಕೇವಲ ಭಾಷಣ ಮಾಡಿಕೊಂಡು ಕುಳಿತುಕೊಂಡರೆ ಸಾಲದು. ನಮ್ಮ ದೇಶದವರನ್ನು ಕೆಣಕಿದವರಿಗೆ ತಕ್ಕ ಉತ್ತರ ಕೊಡಬೇಕು. ಈ ವಿಚಾರದಲ್ಲಿ ರಾಜಕೀಯ ಆಗಬಾರದು ಎಂದು ಖರ್ಗೆ ಹೇಳಿದರು.

ದುರುದ್ದೇಶದಿಂದ ನಡೆದುಕೊಂಡರೆ ಯಾರೂ ಸಹಿಸಲಾರರು: ಖರ್ಗೆ

ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ನಮ್ಮನ್ನು ಹೀಯಾಳಿಸಿದ್ದರು. ಈಗ ಅವರೇ, ಜಾತಿ ಜನಗಣತಿ ಮಾಡಲು ಹೊರಟಿದ್ದಾರೆ. ಬಿಹಾರ ಚುನಾವಣೆ ಗಿಮಿಕ್ ಇರಬಹುದು. ಆ ಕುರಿತು ಮಾತನಾಡುವುದಿಲ್ಲ. ದುರುದ್ದೇಶದಿಂದ ನಡೆದುಕೊಂಡರೆ ಯಾರೂ ಸಹಿಸುವುದಿಲ್ಲ ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ
Image
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
Image
ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ಮೋದಿಗೆ ಖರ್ಗೆ ಪತ್ರ
Image
ಸಿದ್ದರಾಮಯ್ಯ ಹೇಳಿಕೆ ಬಳಿಕ ರಾಹುಲ್ , ಖರ್ಗೆ ವಿರುದ್ಧವೂ ಬಿಜೆಪಿ ಆಕ್ರೋಶ
Image
ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಮಲ್ಲಿಕಾರ್ಜುನ್​ ಖರ್ಗೆ

ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಬೆಂಬಲ ಕೊಟ್ಟಿದ್ದೇವೆ. ನಮಗೆ ದೇಶ ಮುಖ್ಯ. ಯಾವುದೇ ಕ್ರಮ ಕೈಗೊಂಡರೂ ಬೆಂಬಲ ಇದ್ದೇ ಇರುತ್ತದೆ ಎಂದು ಖರ್ಗೆ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಪಹಲ್ಗಾಮ್ ದಾಳಿ ನಡೆದು ಹಲವು ದಿನಗಳೇ ಕಳೆದರೂ ಆ ದಾಳಿಯ ನಂತರದ ಪರಿಣಾಮಗಳನ್ನು ಎದುರಿಸಲು ಸರ್ಕಾರದಲ್ಲಿ ಯಾವುದೇ ಸ್ಪಷ್ಟ ಕಾರ್ಯತಂತ್ರ ಇರುವುದು ಕಂಡುಬರುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಶುಕ್ರವಾರ ಖರ್ಗೆ ಹೇಳಿದ್ದರು. ಪಾಕಿಸ್ತಾನಕ್ಕೆ ಪಾಠ ಕಲಿಸಲು ಮತ್ತು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಒಂದು ರಾಷ್ಟ್ರವಾಗಿ ನಮ್ಮ ಸಾಮೂಹಿಕ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಸಮಯ ಇದು. ಹೇಡಿತನದ ದಾಳಿಯ ಸೂತ್ರಧಾರಿಗಳು ಮತ್ತು ಅಪರಾಧಿಗಳು ತಮ್ಮ ಕ್ರಿಯೆಗಳಿಗೆ ಸಂಪೂರ್ಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಉಗ್ರರ ದಾಳಿ; ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು ಮುಖ್ಯವಾಗುತ್ತದೆ, ಉಳಿದವರ ಮಾತು ಬೇಡ: ಹೆಚ್​ಡಿ ದೇವೇಗೌಡ

ದೇಶದ ಏಕತೆ, ಸಮಗ್ರತೆ ಮತ್ತು ಸಮೃದ್ಧಿಯ ವಿರುದ್ಧದ ಯಾವುದೇ ಬೆದರಿಕೆಗೆ ನಾವು ಒಗ್ಗಟ್ಟಿನಿಂದ ಮತ್ತು ದೃಢವಾಗಿ ಪ್ರತಿಕ್ರಿಯಿಸುತ್ತೇವೆ. ಈ ವಿಷಯದಲ್ಲಿ ಇಡೀ ವಿರೋಧ ಪಕ್ಷವು ಸರ್ಕಾರದ ಜೊತೆ ನಿಂತಿದೆ. ನಾವು ಈ ಸಂದೇಶವನ್ನು ಇಡೀ ಜಗತ್ತಿಗೆ ಕಳುಹಿಸಿದ್ದೇವೆ ಎಂದು ಖರ್ಗೆ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ