ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಹೇಳಿದ್ದಿಷ್ಟು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶುಭಕೋರಿದೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇನೆ. ನನಗೆ ಕೊಟ್ಟಿರುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದು ಹೇಳಿದ್ದಾರೆ.
ಕಲಬುರಗಿ, ಅಕ್ಟೋಬರ್ 28: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇನೆ. ನನಗೆ ಕೊಟ್ಟಿರುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕ ಹಾಗೂ ದಕ್ಷತೆಯಿಂದ ನಾನು ಕೆಲಸ ನಿರ್ವಹಿಸಿದ್ದೇನೆ. 2ನೇ ವರ್ಷದಲ್ಲಿ ಬಹಳಷ್ಟು ಸವಾಲುಗಳಿವೆ ಅದನ್ನು ನಿಭಾಯಿಸುತ್ತೇನೆ. ಯಾವುದೇ ಸಮಸ್ಯೆ ಕೂಡ ನನಗೆ ಕಠಿಣ ಅನಿಸುತ್ತಿಲ್ಲ ಎಂದು ಹೇಳಿದ್ದಾರೆ.
5 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ ಪರ ವಾತಾವರಣವಿದೆ. ಪ್ರಧಾನಿ ಮೋದಿ ತಮ್ಮ ಬಳಿ ಇರುವ ಅಸ್ತ್ರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಈ ಚುನಾವಣೆ ಬಳಿಕ ಎಲ್ಲದಕ್ಕೂ ಸಹ ಜನರು ಉತ್ತರ ಕೊಡುತ್ತಾರೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಅದನ್ನ ನಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಪಾರ್ಟಿ ಅಧ್ಯಕ್ಷರು ಬರುತ್ತಾರೆ ಅವರನ್ನೇ ಕೇಳಿ ಎಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಇದನ್ನೂ ಓದಿ: ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮುತ್ಸದ್ದಿ ನಾಯಕನಾಗಿ, ಕನ್ನಡದ ಮಣ್ಣಿನ ಹೆಮ್ಮೆಯ ಮಗನಾಗಿ, ಸಮಚಿತ್ತದ ಪ್ರಬುದ್ಧ ನಾಯಕನಾಗಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಯಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ತುಂಬಿದ್ದಾರೆ.
ಕಾಂಗ್ರೆಸ್ ಟ್ವೀಟ್
ಮುತ್ಸದ್ದಿ ನಾಯಕನಾಗಿ, ಕನ್ನಡದ ಮಣ್ಣಿನ ಹೆಮ್ಮೆಯ ಮಗನಾಗಿ, ಸಮಚಿತ್ತದ ಪ್ರಬುದ್ಧ ನಾಯಕನಾಗಿ ಶ್ರೀ @kharge ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಯಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ತುಂಬಿದ್ದಾರೆ.
ಸಂಘಟನಾ ಶಕ್ತಿಯನ್ನು ವೃದ್ಧಿಸಿದ ಖರ್ಗೆಯವರು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ… pic.twitter.com/a59Ftghmeu
— Karnataka Congress (@INCKarnataka) October 26, 2023
ಸಂಘಟನಾ ಶಕ್ತಿಯನ್ನು ವೃದ್ಧಿಸಿದ ಖರ್ಗೆಯವರು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮವಹಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ತಿಳಿಸಲಾಗಿದೆ.
ಡಿಕೆ ಶಿವಕುಮಾರ್ ಟ್ವೀಟ್
Congratulations to our very own Karnataka’s son & pride Sri Mallikarjun Kharge on completing one successful year as the President of AICC.
Under your able leadership, the organisation has grown from strength to strength, and I am confident that it will continue to rise further… pic.twitter.com/Bsq2jOybes
— DK Shivakumar (@DKShivakumar) October 26, 2023
ಡಿಸಿಎಂ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದು, ಎಐಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿದ ನಮ್ಮದೇ ಆದ ಕರ್ನಾಟಕದ ಪುತ್ರ ಮತ್ತು ಹೆಮ್ಮೆಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ನಿಮ್ಮ ಸಮರ್ಥ ನಾಯಕತ್ವದಲ್ಲಿ, ನಿಮ್ಮ ಶಕ್ತಿಯಿಂದ ಬೆಳೆದಿದೆ ಮತ್ತು ನಿಮ್ಮ ಮಾರ್ಗದರ್ಶನದಲ್ಲಿ ಪಕ್ಷ ಮತ್ತಷ್ಟು ಬೆಳೆಯುವ ವಿಶ್ವಾಸ ನನಗೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.