ಬಾಲಕ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಮತ್ತು ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಪೋಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಾಲಕ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಕಲಬುರಗಿಯಲ್ಲಿ ಬಾಲಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸಿದ ಪೊಲೀಸರು (ಸಾಂದರ್ಭಿಕ ಚಿತ್ರ)
Edited By:

Updated on: Aug 21, 2023 | 4:51 PM

ಕಲಬುರಗಿ, ಆಗಸ್ಟ್ 21: ಅಪ್ರಾಪ್ತ ಬಾಲಕಿ ಹಾಗೂ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಬಳಿ ಘಟನೆ ನಡೆದಿದೆ. 6 ವರ್ಷದ ಬಾಲಕ ಹಾಗೂ 8 ವರ್ಷದ ಬಾಲಕಿ ಇಬ್ಬರ ಮೇಲೂ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆ ಆರೋಪಿ ವಿರುದ್ಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಅದರಂತೆ ಕೋರ್ಟ್, ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಬೆಂಗಳೂರು: 7 ವರ್ಷದ ಬಾಲಕಿಗೆ 74 ವರ್ಷದ ನಿವೃತ್ತ ಪೊಲೀಸ್ ಸಬ್‌ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ, ರಿಟೈಡ್ ಅಧಿಕಾರಿ ಅರೆಸ್ಟ್

ಏನಿದು ಪೋಕ್ಸೋ ಕಾಯ್ದೆ:

ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಸಲುವಾಗಿ 2012 ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಯಾವುದೇ ರೀತಿ ಲೈಂಗಿಕ ಕ್ರಿಯೆಗಳಿಗೆ ಮಕ್ಕಳನ್ನು ಬಳಸುವುದನ್ನು ನಿಷೇಧಿಸುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯಡಿಯಲ್ಲಿ 5 ರಿಂದ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ