ಕಲಬುರಗಿ ರೊಟ್ಟಿ ಬ್ರ್ಯಾಂಡ್ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರು ಇಂದು(ಮಾ.12) “ಕಲಬುರಗಿ ರೊಟ್ಟಿ” ಬ್ರ್ಯಾಂಡ್ ಬಿಡುಗಡೆಗೊಳಿಸಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ರೊಟ್ಟಿ ಬ್ರ್ಯಾಂಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ರೊಟ್ಟಿ ತಿಂದವರು ಬಲುಗಟ್ಟಿ. ಇದು ಸಿರಿಧಾನ್ಯದ ಶಕ್ತಿಯಾಗಿದ್ದು, ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸರ್ಕಾರ ಬ್ರ್ಯಾಂಡಿಂಗ್ ಮಾಡಲಾಗುತ್ತಿದೆ ಎಂದರು.

ಕಲಬುರಗಿ ರೊಟ್ಟಿ ಬ್ರ್ಯಾಂಡ್ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 12, 2024 | 4:34 PM

ಕಲಬುರಗಿ, ಮಾ.12: ಸಿರಿಧಾನ್ಯಕ್ಕೆ ಇದೀಗ ಎಲ್ಲೆಡೆ ಬೇಡಿಕೆ ಹೆಚ್ಚಳವಾಗಿರುವ ಹಿನ್ನಲೆ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರು ಇಂದು(ಮಾ.12) “ಕಲಬುರಗಿ ರೊಟ್ಟಿ” ಬ್ರ್ಯಾಂಡ್ ಬಿಡುಗಡೆಗೊಳಿಸಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ರೊಟ್ಟಿ ಬ್ರ್ಯಾಂಡಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ರೊಟ್ಟಿ ತಿಂದವರು ಬಲುಗಟ್ಟಿ. ಇದು ಸಿರಿಧಾನ್ಯದ ಶಕ್ತಿಯಾಗಿದ್ದು, ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸರ್ಕಾರ ಬ್ರ್ಯಾಂಡಿಂಗ್ ಮಾಡಲಾಗುತ್ತಿದೆ. ಇದರಿಂದ ರೊಟ್ಟಿ ತಯಾರಿಸುವ ಮಹಿಳೆಯರ ಆದಾಯ ದ್ವಿಗುಣವಾಗಲಿದೆ ಎಂದರು.

ಇನ್ನು ನಾನಾ ಕಾರಣದಿಂದ ನಗರ ನಿವಾಸಿಗಳು ರೊಟ್ಟಿಯಿಂದ ದೂರವಾಗುತ್ತಿದ್ದಾರೆ. ಇದರ ಪರಿಣಾಮ ಸಕ್ಕರೆ ಕಾಯಿಲೆ, ಅನೇಮಿಯಾದಂತಹ ಸಮಸ್ಯೆ ಕಾಣುತ್ತಿದ್ದೇವೆ. ಕಲಬುರಗಿ ರೊಟ್ಟಿ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದೆ. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಪ್ರತಿ ವರ್ಷ 1 ಲಕ್ಷ ಟನ್ ಬಿಳಿ ಜೋಳ ಬೆಳೆಯುತ್ತಿದ್ದು, ರೊಟ್ಟಿ ತಯಾರಿಸಿ ಮಾರಾಟ ಮಾಡಲು ಇದು ಪೂರಕವಾಗಿದೆ. ಪ್ರಸ್ತುತ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರು ಗುಂಪಾಗಿ ಸೇರಿ ರೊಟ್ಟಿಯನ್ನು ತಯಾರಿಸಿ, ಅದಕ್ಕೆ ತಮ್ಮ ಸಂಸ್ಥೆ ಹೆಸರಿಟ್ಟು ಹೋಟೆಲ್-ಖಾನಾವಳಿಗೆ ಮಾರಾಟ ಮಾಡುತ್ತಿದ್ದಾರೆ. ಇದನ್ನು ವ್ಯವಸ್ಥಿತವಾಗಿ ಮಾಡಲು ಮತ್ತು ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸಲು ರೊಟ್ಟಿ ತಯಾರಕರು ಮತ್ತು ರೊಟ್ಟಿ ಖರೀದಿದಾರ ನಡುವೆ ಇಂದು ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಸ್ವ-ಸಹಾಯ ಸಂಘದ ಮಹಿಳೆಯರಿಗೆ ರೊಟ್ಟಿ ತಯಾರಿಕೆ ಯಂತ್ರ ಸಹ ನೀಡಲಾಗುತ್ತಿದೆ. ಒಟ್ಟಾರೆ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಇಂದಿರಾ ಕ್ಯಾಂಟೀನ್, ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿದ್ದರಾಮಯ್ಯ ಘೋಷಣೆ

ರೈತರ ಆದಾಯ ದ್ವಿಗುಣಕ್ಕೆ ಪಂಚ ಯೋಜನೆಗಳು ಜಾರಿ

ಇದೇ ಪ್ರಥಮ ಬಾರಿಗೆ ರೈತರ ಆದಾಯ ವೃದ್ಧಿಗೆ ಮತ್ತು ನವೀನ ತಂತ್ರಜ್ಞಾನಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿಯಿಂದ ರೈತರ ಕಲ್ಯಾಣಕ್ಕೆ ಕಲಬುರಗಿ ಜಿಲ್ಲೆಯಲ್ಲಿ 27.20 ಕೋಟಿ ರೂ. ಮೊತ್ತದ ಪಂಚ ಯೋಜನೆಗಳು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದ್ದು, ಇದರ ಫಲಿತಾಂಶದ ಮೇರೆಗೆ ಪ್ರದೇಶದ ಇತರೆ ಜಿಲ್ಲೆ, ತಾಲೂಕಿಗೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಡ್ರೋನ್ ತಂತ್ರಜ್ಞಾನ ಬಳಸಿ ಕೀಟನಾಶಕ ಮತ್ತು ರಸಗೊಬ್ಬರ ಸಿಂಪಡಿಸಲು ಜಿಲ್ಲೆಯ ಅಫಜಲಪೂರ, ಕಮಲಾಪೂರ, ಚಿತ್ತಾಪೂರ ಹಾಗೂ ಸೇಡಂ ತಾಲೂಕಿನಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಸಿಂಪರಣಾ ಕೇಂದ್ರಗಳ ಸ್ಥಾಪನೆ, ಭೌಗೋಳಿಕ ಸೂಚ್ಯಂಕ ಹೊಂದಿರುವ ತೊಗರಿ, ಕೆಂಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳ ಶೇಖರಣೆಗೆ ಚಿತ್ತಾಪೂರನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶೀತಲೀಕರಣ ಘಟಕ ಸ್ಥಾಪನೆ, ಜಿಲ್ಲೆಯಲ್ಲಿ ಬೆಳೆಯುವ ಬಿಳಿಜೋಳ, ಸಜ್ಜೆ ಹಾಗೂ ಸಿರಿಧಾನ್ಯಗಳ ಮೌಲ್ಯವರ್ಧನೆಗೆ ತಲಾ 150 ಲಕ್ಷ ರೂ. ವೆಚ್ಚದಲ್ಲಿ ಚಿತ್ತಾಪೂರ ಹಾಗೂ ಅಫಜಲಪೂರ ತಾಲೂಕಿನಲ್ಲಿ ಮೌಲ್ಯವರ್ಧನೆ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ.

ಇದನ್ನೂ ಓದಿ:ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಸಿದ್ದರಾಮಯ್ಯ ಚಾಲನೆ

ವಿಶೇಷವಾಗಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಹಾಯವಾಗಲು ಗ್ರಾಮ ಮಟ್ಟದಲ್ಲಿ 9 ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳನ್ನು ಮಹಿಳಾ ಸ್ವ-ಸಹಾಯ ಸಂಘಗಳಿಗೆ ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿ ಕೇಂದ್ರಕ್ಕೆ ರೂ 50 ಲಕ್ಷ ರೂ. ಒದಗಿಸಲಾಗುವುದು. ಇದಲ್ಲದೆ ಭೂರಹಿತರ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲೆಯ ಹಳೆಯ ತಾಲೂಕಿಗೆ ಒಂದರಂತೆ ಒಟ್ಟು 7 ಕಿರು ಜಲಾನಯನ ಪ್ರದೇಶಗಳ ಉಪಚಾರಕ್ಕೆ ಪ್ರತಿ ಕಿರು ಜಲಾಯನಕ್ಕೆ 1.10 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹೀಗೆ ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಜ್ಜೆ ಇಟ್ಟಿದೆ ಎಂದರು.

ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಮಕ್ಷಮದಲ್ಲಿ ಕಲಬುರಗಿ ರೊಟ್ಟಿ ತಯಾರಕರ ಸಂಘ ಮತ್ತು ಕಲಬುರಗಿ ಹೋಟೆಲ್ ಮಾಲೀಕರ ಸಂಘ ಮತ್ತು ಮಂಜುನಾಥ ಫುಡ್ ಪ್ರೊಡೆಕ್ಟ್-ಸಪ್ತಗಿರಿ ಹೋಟೆಲ್ ಸಮೂಹ ನಡುವೆ ರೊಟ್ಟಿ ಬ್ರ್ಯಾಂಡ್ ವಹಿವಾಟಿಗೆ ಒಪ್ಪಂದ ಪತ್ರ ವಿನಿಮಯ ಮಾಡಿಕೊಂಡರು.

ರೊಟ್ಟಿ ತಯಾರಿಕಾ ಯಂತ್ರ ವಿತರಣೆ

ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡನೇ ಕೃಷಿ ನಿರ್ದೇಶನಾಲಯ ಯೋಜನೆಯಡಿ ಕಲಬುರಗಿ ತಾಲೂಕಿನ ಕುಸನೂರ ಗ್ರಾಮದ ಮಹಾದೇವಿ ಬಸಣ್ಣಾ ಎಂಬ ಮಹಿಳೆಗೆ ಘಟಕ ವೆಚ್ಚ 6 ಲಕ್ಷ ರೂ. ಗಳಲ್ಲಿ 3 ಲಕ್ಷ ರೂ. ಸಹಾಯಧನದ ರೊಟ್ಟಿ ತಯಾರಿಕಾ ಯಂತ್ರಗಳನ್ನು ವಿತರಣೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್