ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು ಪ್ರಮುಖ ನದಿಯಾದ ಭೀಮಾ ನದಿಯಲ್ಲಿ ನೀರಿನ ಕೊರತೆಯಾಗಿದೆ. ಇದರಿಂದಾಗಿ ಜಿಲ್ಲೆಯ ಭೀಮಾ ತೀರದ ಗ್ರಾಮಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿತ್ತು. ಈ ಹಿನ್ನಲೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರ ಜಲಾಶಯದಿಂದ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು- ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 26, 2024 | 10:46 PM

ಕಲಬುರಗಿ, ಮಾ.26: ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರ ಜಲಾಶಯದಿಂದ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು ಪ್ರಮುಖ ನದಿಯಾದ ಭೀಮಾ ನದಿಯಲ್ಲಿ ನೀರಿನ ಕೊರತೆಯಾಗಿದೆ. ಇದರಿಂದಾಗಿ ಜಿಲ್ಲೆಯ ಭೀಮಾ ತೀರದ ಗ್ರಾಮಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿತ್ತು. ಈ ಕುರಿತು ಮಾನ್ಯ ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಭೀಮಾ ನದಿಗೆ ನೀರುವ ಬಿಡುವ ಅವಶ್ಯಕತೆಗಳ ಕುರಿತಂತೆ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆ. ಈ ನಡುವೆ ಶಾಸಕರಾದ ಎಂ.ವೈ.ಪಾಟೀಲ ಅವರೂ ಕೂಡ ಮಾನ್ಯ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭೀಮಾ ತೀರದ ಗ್ರಾಮಗಳಲ್ಲಿನ ಕುಡಿಯುವ ನೀರಿನ ಬವಣೆ ಹಾಗೂ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅವಶ್ಯಕತೆಯನ್ನು ಚರ್ಚಿಸಿದ್ದರು.

ಇದನ್ನೂ ಓದಿ:ವಿಜಯಪುರ: ಭೀಮಾನದಿ ಪಟ್ಟದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಟ್, ರೈತರು ಆಕ್ರೋಶ

ಇದರ ಪರಿಣಾಮವಾಗಿ, ಸರ್ಕಾರದ ನಿರ್ದೇಶನದಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ನಾರಾಯಣಪುರ ಜಲಾಶಯದಿಂದ ಸಂಬಂಧಿಸಿದ ಕಾಲುವೆಗಳ ಮೂಲಕ ಭೀಮಾ ನದಿಯ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸುವಂತೆ ಅದೇಶ ಹೊರಡಿಸಿದ್ದಾರೆ. ಸತತ ಪರಿಶ್ರಮ ಹಾಗೂ ಸ್ಥಳೀಯ ಶಾಸಕರ ಒತ್ತಾಸೆಯಿಂದಾಗಿ ಭೀಮಾ ನದಿಗೆ ನೀರು ಹರಿಸುವಂತೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಜೊತೆಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದಲೂ ಕೂಡ ಭೀಮಾ ನದಿಗೆ ನೀರು ಹರಿಸುವಂತೆ ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಆದರೆ, ಪತ್ರಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಆದರೂ ಕೂಡ ಸರ್ಕಾರದ ಮಟ್ಟದಲ್ಲಿ ಇನ್ನೂ ಒತ್ತಡ ಹೇರಲಾಗುತ್ತಿದೆ ಎಂದು ಖರ್ಗೆ ಅವರು ತಿಳಿಸಿದ್ದಾರೆ. ಈಗ ಭೀಮಾ ನದಿಗೆ ಬಿಟ್ಟಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಸಚಿವರು, ಕೃಷಿ ಚಟುವಟಿಕೆಗಳು ನೀರು ಬಳಸದಂತೆ ಅವರು ಮತ್ತೊಮ್ಮೆ ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us