AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಮ್ಮತಿ: RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಬಹುತೇಕ ಕಡೆ RSS ಪಥಸಂಚಲನಕ್ಕೆ ಅವಕಾಶ ಸಿಕ್ಕಿದ್ದರೂ ಚಿತ್ತಾಪುರದಲ್ಲಿ ಮಾತ್ರ ಕಗ್ಗಂಟಾಗಿತ್ತು. ಇದೀಗ ಅಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬೆನ್ನಲ್ಲೇ ಟ್ವೀಟ್​ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಮ್ಮತಿ: RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ಪಥಸಂಚಲನ, ಸಚಿವ ಪ್ರಿಯಾಂಕ್ ಖರ್ಗೆ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 13, 2025 | 5:56 PM

Share

ಕಲಬುರಗಿ, ನವೆಂಬರ್​ 13: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ (RSS) ಪಥಸಂಚಲನ ವಿವಾದ ಕೊನೆಗೂ ಇತ್ಯರ್ಥವಾಗಿದೆ. ಎರಡೆರಡು ಬಾರಿ ಶಾಂತಿ ಸಭೆ ಬಳಿಕ ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್​​ ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್​ ಸಿಕ್ಕಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್​ ಮಾಡಿದ್ದು, ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್​​​​ಎಸ್​​ಎಸ್​​ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಕಿಡಿಕಾರಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್​

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್​​ಎಸ್​​ಎಸ್​​ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದಿದ್ದಾರೆ.

  • 300 ಜನರು ಮಾತ್ರ ಭಾಗವಹಿಸಬೇಕು.
  • ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ
  • ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ
  • ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು. ಜೈ ಸಂವಿಧಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Chittapur RSS March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಗ್ಗಂಟಾಗಿತ್ತು. ಪಥಸಂಚಲನ ವಿಚಾರದಲ್ಲಿ ಭಾರೀ ಹೈಡ್ರಾಮಾವೇ ನಡೆದಿತ್ತು. ಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದೇ ನವೆಂಬರ್ 16ರಂದು ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ಕೊಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ