ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ

ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರ ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ
ಚಂದ್ರಶೇಖರ್ ಚೌಲ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Dec 24, 2023 | 8:51 AM

ಕಲಬುರಗಿ, ಡಿ.24: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನ ಬರ್ಬರ (Murder) ಕೊಲೆಯಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನನ್ನು ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ

ಇನ್ನು ಕಲಬುರಗಿಯಲ್ಲೇ ಮತ್ತೊಂದು ಕೊಲೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಗುರುತು ಸಿಗಬಾರದೆಂದು ಶವವನ್ನ ಪೆಟ್ರೋಲ್ ಹಾಕಿ ಸುಡಲಾಗಿದೆ. ದಾವಲ್‌ಸಾಬ್ (25) ಹತ್ಯೆಯಾದ ವ್ಯಕ್ತಿ. ಚಿತ್ತಾಪುರ ಪಟ್ಟಣದಲ್ಲಿ ಹೂವಿನ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದ ದಾವಲ್‌ಸಾಬ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ತಡರಾತ್ರಿ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ‌. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ