ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ
ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು, ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಹೆಣ ಪತ್ತೆ
Follow us
TV9 Web
| Updated By: ಆಯೇಷಾ ಬಾನು

Updated on: Aug 26, 2021 | 9:26 AM

ಕಲಬುರಗಿ: ಕಮಲಾಪುರ ತಾಲೂಕಿನ ಕುರಿಕೋಟಾದ ಸೇತುವೆ ಬಳಿ ಸಾಲು ಸಾಲು ಹೆಣಗಳು ಪತ್ತೆಯಾಗುತ್ತಿವೆ. ಅದರಂತೆ ನಿನ್ನೆ ಕೂಡ ಒಂದು ಹೆಣ ಸಿಕ್ಕಿದೆ. ಕುರಿಕೋಟಾ ಗ್ರಾಮದ ಬೆಣ್ಣೆ ತೋರಾ ಹಿನ್ನಿರಿನಲ್ಲಿ ಶವ ತೇಲುತಿರೋದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲ್ಲಿ ಹೆಚ್ಚು ಜನ ಸೂಸೈಡ್ ಮಾಡಿಕೊಳ್ಳುವುದರಿಂದ ಯಾರಾದ್ರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಮೀನುಗಾರರ ಸಹಾಯದಿಂದ ಸ್ಥಳೀಯರು ಶವ ಹೊರತೆಗೆದಿದ್ದಾರೆ. ಆದ್ರೆ ಶವದ ಸ್ಥಿತಿ ನೋಡಿದಾಗಿ ಇವರಿಗೆ ಶಾಕ್ ಆಗಿದೆ. ಯಾಕಂದ್ರೆ ಇದು ಆತ್ಮಹತ್ಯೆ ಆಗಿರಲಿಲ್ಲ, ಕೊಲೆ ಆಗಿತ್ತು.

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ, ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಭೀಕರವಾಗಿ ಕೊಲೆ ಮಾಡಿರೋ ಪಾಪಿಗಳು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಕುರಿಕೋಟಾ ಸೇತುವೆ ಇತ್ತೀಚೆಗೆ ಸುಸೈಡ್ ಸ್ಟಾಟ್ ಜೊತೆಗೆ ಮರ್ಡರ್ ಸ್ಟಾಟ್ ಆಗುತ್ತಿರೋದು ಸುತ್ತಮುತ್ತಲಿನ ಗ್ರಾಮದ ಜನರ ಆತಂಕಕ್ಕೆ ಕಾರಣವಾಗಿದೆ. ಬೆಣ್ಣೆ ತೋರಾ ಹಿನ್ನಿರಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಮೇಲಿಂದ ಜಿಗಿದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹೆಣವನ್ನ ಹಾಕುತ್ತಿರೋ ಪ್ರಕರಣಗಳು ಹೆಚ್ಚಾಗಿವೆ.

‘ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾಗಬೇಕು’ ‘ಮಹಗಾಂವ್ ಠಾಣೆಯಲ್ಲಿ ವ್ಯಕ್ತಿ ಒಬ್ಬನ ಕೊಲೆ ಬಗ್ಗೆ ಕೇಸ್ ದಾಖಲಾಗಿದೆ. ಮೊದಲು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾದ್ರೆ, ಸುಲಭವಾಗಿ ಕೊಲೆಗಾರರು ಯಾರು, ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಅನ್ನೋದು ಗೊತ್ತಾಗಲಿದೆ.’ ಸದ್ಯ ಶವ ಸಿಕ್ಕಿರೋ ಬಗ್ಗೆ ಮಹಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು ಅನ್ನೋದು ಗೊತ್ತಾದ್ರೆ ಕೊಲೆ ಮಾಡಿದ್ದು ಯಾರು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅನ್ನೋದು ಆದಷ್ಟು ಬೇಗ ಗೊತ್ತಾಗಲಿದೆ.

ಇದನ್ನೂ ಓದಿ: ದನ ಮೇಯಿಸಲು ಹೋಗಿದ್ದ ಮಹಿಳೆಯ ಒರ್ಬರ ಕೊಲೆ, ಮಾಂಗಲ್ಯ ಸರ ನಾಪತ್ತೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ