ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಯುವಕನ ಮೇಲೆ ಹಲ್ಲೆ, ಚಾಕು ಇರಿದು ಪರಾರಿ
ಕಲಬುರಗಿ: ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿ, ಚಾಕು ಇರಿದು ಕೊಲೆಗೆ ಯತ್ನ ಮಾಡಿರುವ ಘಟನೆ ರೆಹಮತ್ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ರೆಹಮತ್ ನಗರದ ನಿವಾಸಿ ಇಸ್ಲಾಮುದ್ದೀನ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಎನ್‌ಟಿ ಕ್ವಾರ್ಟರ್ಸ್ ಬಳಿ ಬೈಕ್ ಅಡ್ಡ ಕಟ್ಟಿದ ದುಷ್ಕರ್ಮಿಗಳು ಯುವಕನನ್ನು ಥಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಸ್ವಸ್ಥ ಯುವಕ ಇಸ್ಲಾಮುದ್ದೀನ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. […]
ಕಲಬುರಗಿ: ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿ, ಚಾಕು ಇರಿದು ಕೊಲೆಗೆ ಯತ್ನ ಮಾಡಿರುವ ಘಟನೆ ರೆಹಮತ್ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ರೆಹಮತ್ ನಗರದ ನಿವಾಸಿ ಇಸ್ಲಾಮುದ್ದೀನ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಎನ್‌ಟಿ ಕ್ವಾರ್ಟರ್ಸ್ ಬಳಿ ಬೈಕ್ ಅಡ್ಡ ಕಟ್ಟಿದ ದುಷ್ಕರ್ಮಿಗಳು ಯುವಕನನ್ನು ಥಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಅಸ್ವಸ್ಥ ಯುವಕ ಇಸ್ಲಾಮುದ್ದೀನ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.