ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಸಿಎಂ ಆಗುತ್ತಿದ್ದೆ: ಬಸನಗೌಡ ಪಾಟೀಲ್ ಯತ್ನಾಳ್

​ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿದ್ದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

Follow us
TV9 Web
| Updated By: ವಿವೇಕ ಬಿರಾದಾರ

Updated on:Feb 28, 2023 | 10:44 AM

ಕಲಬುರಗಿ: ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿದ್ದೆ ಎಂದು ವಿಜಯಪುರ (Vijaypura) ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ (Mla Basanagouda Patil Yatnal) ಹೇಳಿದ್ದಾರೆ. ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್​ ಯತ್ನಾಳ ಆಗಾಗ ಮುಖ್ಯಮಂತ್ರಿಯಾಗುತ್ತಿದ್ದೆ ಎಂಬ ಹೇಳಿಕೆಗಳನ್ನು ನಿಡುತ್ತಲೇ ಇರುತ್ತಾರೆ. ಈ ಹಿಂದೆ ಕೂಡ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಹೋರಾಟದಲ್ಲೂ ಕೂಡ ಎಲ್ಲರ ಜೊತೆ ಅಡ್ಜಸ್ಟ್​ ಆಗಿದ್ದರೆ ನಾನೆ ಮುಖ್ಯಮಂತ್ರಿಯಾಗುತ್ತಿದ್ದೆ ಎಂದಿದ್ದರು. ಇದಕ್ಕೂ ಮುಂಚೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು, ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು ಎಂದು ಹೇಳಿದ್ದರು. ವಿಧಾನಸಭೆ ಚುನಾವಣೆ ಹತ್ತಿರದಲ್ಲಿ ಇರುವಾಗಲೆ ಈ ಮಾತುಗಳನ್ನು ಆಡಿದ್ದಾರೆ.

ಕಳೆದ ರಾತ್ರಿ ಕಲಬುರಗಿ ನಗರದಲ್ಲಿ ನಡೆದ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ನಾನು ಯಾವುದೇ ಹುದ್ದೆಯ ಆಸೆ‌ ಪಟ್ಟವನಲ್ಲ. ಆ ಹುದ್ದೆ ನನಗೆ ಬರುವುದಿದ್ದರೇ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಏನು ಆಗದಿದ್ದರೂ ಪರವಾಗಿಲ್ಲ, ಮತ್ತೊಬ್ಬರನ್ನು ನೋಡಿ ಖುಷಿ ಪಡುತ್ತೇನೆ. ಮತ್ತೊಬ್ಬರನ್ನು ನೋಡಿ‌ ಸಂತೋಷಪಡುವ ವ್ಯಕ್ತಿ ನಾನು ಎಂದು ಹೇಳಿದ್ದಾರೆ.

ವೈಷಮ್ಯ ಮರೆತು ಯಡಿಯೂರಪ್ಪರನ್ನು ಹಾಡಿ ಹೊಗಳಿದ ಯತ್ನಾಳ

ಮಾಜಿ ಮುಖ್ಯಮಂತ್ರಿ  ಬಿ.ಎಸ್​​.ಯಡಿಯೂರಪ್ಪ (BS Yediyurappa) ನಮ್ಮನ್ನೆಲ್ಲ ಮುನ್ನಡೆಸುತ್ತಿದ್ದರು. ಬಿಎಸ್​ ಯಡಿಯೂರಪ್ಪ ಅವರ ಜತೆ ಏನೇ ವೈಷಮ್ಯ ಇರಬಹುದು, ಅವರು ನಮ್ಮ ನಾಯಕರು. ಅನಂತಕುಮಾರ್‌ ಮತ್ತು ಯಡಿಯೂರಪ್ಪ ಕೃಷ್ಣ ಅರ್ಜುನ ರೀತಿ ಪಕ್ಷ ಕಟ್ಟಿದರು. ಯಡಿಯೂರಪ್ಪ, ಅನಂತಕುಮಾರ್‌ ನನ್ನನ್ನು ಕೇಂದ್ರ ಸಚಿವರನ್ನಾಗಿ ಮಾಡಿದರು ಎಂದು 15ನೇ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಹೇಳಿದ್ದರು. ಪಕ್ಷ ಇಂದು ಈ ಸ್ಥಾನದಲ್ಲಿ ಇರಲು ಅವರೇ ಕಾರಣ ಎಂದು ಯತ್ನಾಳ್‌ ಬಿಎಸ್‌ವೈ ಅವರನ್ನು ಶ್ಲಾಘಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:38 am, Tue, 28 February 23

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್