ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ: ಜಮೀರ್ ಅಹ್ಮದ್

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

Follow us
TV9 Web
| Updated By: ವಿವೇಕ ಬಿರಾದಾರ

Updated on:Feb 07, 2023 | 3:41 PM

ಕಲಬುರಗಿ: ಬಿಜೆಪಿಯವರು (BJP) ದುಡ್ಡು ಕೊಟ್ಟು ಜೆಡಿಎಸ್ (JDS) ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ (Zameer Ahmed) ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಕಾಂಗ್ರೆಸ್ (Congress)​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಹಿಂದೂ, ಮುಸ್ಲಿಮರು ಸಹೋದರರಂತೆ ಇದ್ದಾರೆ. ಬಿಜೆಪಿ ಹಿಂದೂ, ಮುಸ್ಲಿಂ ಭೇದಭಾವ ಸೃಷ್ಟಿಸಿ ಮತ ಪಡೆಯುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅನುದಾನ ಕಡಿಮೆ ಮಾಡಿದ್ದರು. ಮುಸ್ಲಿಂರಿಗೆ ಕಾಂಗ್ರೆಸ್ ಎಲ್ಲಾ ನೀಡಿದೆ ಎಂದು ವಾಗ್ದಾಳಿ ಮಾಡಿದರು.

ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ (ಜೆಡಿಎಸ್​) ಹೋಗಿದ್ದಾರೆ

ಹೆಚ್​ಡಿ ಕುಮಾರಸ್ವಾಮಿ ತಾವೇ ದೊಡ್ಡ ನಾಯಕ ಅಂತಾ ಅಂದುಕೊಂಡಿದ್ದಾರೆ. ಆದರೆ ಈ ಭಾರಿ ಜೆಡಿಎಸ್ 15 ರಿಂದ 16 ಸ್ಥಾನ ಗೆದ್ದರೆ ಅದೇ ದೊಡ್ಡದು. ಈ ಹಿಂದೆ ಸಿದ್ದರಾಮಯ್ಯ ಹಿಂದೆ ಸಿ.ಎಂ.ಇಬ್ರಾಹಿಂ ಓಡಾಡುತ್ತಿದ್ದರು. ಆಗ ಸಿ.ಎಂ.ಇಬ್ರಾಹಿಂ ಜೆಡಿಎಸ್​ ಖಾಲಿ ಬಸ್​​ ಅಂತಾ ಹೇಳುತ್ತಿದ್ದರು. ಆದರೆ ಈಗ ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅನ್ನೋ ಇಂಜಿನ್ ಕಾಂಗ್ರೆಸ್​ನಲ್ಲಿದೆ. ಸತ್ತಾಗ ಹೇಗೆ ನಾಲ್ಕು ಜನರು ಹೊತ್ತುಕೊಂಡು ಹೋಗುತ್ತಾರೋ, ಹಾಗೆ ಆ ಖಾಲಿ ಬಸ್ ಅನ್ನು ತಳ್ಳಿಕೊಂಡು ಹೋಗುವಂತಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Tue, 7 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ