ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ರಾಜೀನಾಮೆ ಬೆನ್ನಲ್ಲೇ ಬಿಆರ್ ಪಾಟೀಲ್ ಅಸಮಾಧಾನ

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಶಾಸಕ ಬಿಆರ್ ಪಾಟೀಲ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದೇನೆಂಬುದರ ವಿವರ ಇಲ್ಲಿದೆ.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ರಾಜೀನಾಮೆ ಬೆನ್ನಲ್ಲೇ ಬಿಆರ್ ಪಾಟೀಲ್ ಅಸಮಾಧಾನ
ಬಿಆರ್ ಪಾಟೀಲ್ (ಸಂಗ್ರಹ ಚಿತ್ರ)
Edited By:

Updated on: Feb 02, 2025 | 11:07 AM

ಕಲಬುರಗಿ, ಫೆಬ್ರವರಿ 2: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ಶಾಸಕ ಬಿಆರ್​ ಪಾಟೀಲ್ ಹೇಳಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.

ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿಆರ್ ಪಾಟೀಲ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು.

ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಸಿಎಂ ರಾಜಕೀಯ ಸಲಹೆಗಾರ ಬಿಆರ್ ಪಾಟೀಲ್ ರಾಜೀನಾಮೆ

ಬಿಆರ್ ಪಾಟೀಲ್ ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇರುವ ಕಾರಣಕ್ಕಾಗಿ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಆದರೆ, ಕಳೆದ ಬಜೆಟ್‌ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೆಲವು ಮೂಲಗಳು ವಿಶ್ಲೇಷಿಸಿವೆ. ಇನ್ನು ಕೆಲವು ಮೂಲಗಳು, ಈಗ ರಾಜೀನಾಮೆ ಮೂಲಕ ಒತ್ತಡ ಹಾಕಿ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನಿರೀಕ್ಷಿಸುತ್ತಿರುವ ಸಾಧ್ಯತೆ ಇದೆ ಎಂದೂ ಹೇಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us