ಬಾತ್ ರೂಂ ಮತ್ತು ವಾಶ್ ಬೇಶನ್ ಪೈಪ್​ನಲ್ಲಿ ದುಡ್ಡಿನ ಕಂತೆ ಹಾಕಿದ್ದ ಪಿಡಬ್ಲೂಡಿ ಶಾಂತಗೌಡ; ವಿಡಿಯೋ ನೋಡಿ

ಮನೆಯ ಎರಡನೇ ಪ್ಲೋರ್​ನಲ್ಲಿ ವಾಸವಾಗಿರುವ ಶಾಂತಗೌಡ ಮತ್ತು ಪುತ್ರ, ಎಸಿಬಿ ಅಧಿಕಾರಿಗಳು ಬರುತ್ತಿದ್ದಂತೆ ಹಣದ ಕಂತೆಯನ್ನು ಪೈಪ್​ಗೆ ಹಾಕಿದ್ದಾರೆ. ಪೈಪ್​ನಲ್ಲಿಯೇ ಐದು ಲಕ್ಷ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ.

ಕಲಬುರಗಿ: ಪಿಡಬ್ಲೂಡಿ ಶಾಂತಗೌಡ ಅವರ ಮನೆಯ ಬಾತ್ ರೂಂ ಮತ್ತು ವಾಶ್ ಬೇಶನ್ ಪೈಪ್​ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ ಮನೆಯ ಪೈಪ್​ನಲ್ಲಿ ಹಣ ಪತ್ತೆಯಾಗಿದೆ. ಮನೆಯ ಎರಡನೇ ಪ್ಲೋರ್​ನಲ್ಲಿ ವಾಸವಾಗಿರುವ ಶಾಂತಗೌಡ ಮತ್ತು ಪುತ್ರ, ಎಸಿಬಿ ಅಧಿಕಾರಿಗಳು ಬರುತ್ತಿದ್ದಂತೆ ಹಣದ ಕಂತೆಯನ್ನು ಪೈಪ್​ಗೆ ಹಾಕಿದ್ದಾರೆ. ಪೈಪ್​ನಲ್ಲಿಯೇ ಐದು ಲಕ್ಷ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ (PWD) ಜೆ.ಇ. ಶಾಂತಗೌಡ ಬಿರಾದಾರ್‌ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್‌ ಅವರ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್‌ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕಲಬುರಗಿ ಪಿಡಬ್ಲೂಡಿ ಅಧಿಕಾರಿ ಬಳಿ ಕೋಟಿ ಕೋಟಿ ಆಸ್ತಿ ಪತ್ತೆ:
ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿದ್ದು, ಕಲಬುರಗಿ ಗುಬ್ಬಿ ಕಾಲೋನಿಯಲ್ಲಿ ಮೂರಂತಸ್ತಿನ ಭವ್ಯ ಬಂಗಲೆ, ವಿವಿ ರಸ್ತೆಯಲ್ಲಿ ಎರಡು ನಿವೇಶನ, ಯಡ್ರಾಮಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ 40 ಎಕರೆ ಜಮೀನು, ಹಂಗರಗಾ ಗ್ರಾಮದಲ್ಲಿ ಮೂರು ಮನೆಗಳು ಸೇರಿ ಕೋಟಿ ಕೋಟಿ ಆಸ್ತಿ ಪತ್ತೆಯಾಗಿದೆ. ಇನ್ನು ಬೆಂಗಳೂರಿನಲ್ಲೂ ಆಸ್ತಿ ಇರುವ ಮಾಹಿತಿ ಸಿಕ್ಕಿದ್ದು, ಎರಡು ಕಾರ್, ಎರಡು ಬೈಕ್ ಸೇರಿ ವಾಹನಗಳು ಸಹ ಪತ್ತೆಯಾಗಿದೆ.

Click on your DTH Provider to Add TV9 Kannada