ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ

| Updated By: ವಿವೇಕ ಬಿರಾದಾರ

Updated on: Aug 10, 2024 | 12:49 PM

ಕಲಬುರಗಿ ಜಿಲ್ಲೆಯ ಸೇಡಂ‌ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಯುವಕರು ಪ್ರಶ್ನೆ ಮಾಡಿದ್ದಕ್ಕೆ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸೇಡಂ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ.

ಕಲಬುರಗಿ, ಆಗಸ್ಟ್​ 10: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ‌ (Sedam) ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ. ರಘು ರಡ್ಡಿ ಮತ್ತು ರಾಹುಲ್​ ರೆಡ್ಡಿ ಹಲ್ಲೆಗೊಳಗಾದವರು. ಮೆಹಬೂಬ್‌, ಸ್ನೇಹಿತರಾದ ಸೈಯದ್, ಸಲ್ಮಾನ್, ಶೇಖ್‌ ಹಲ್ಲೆ ಮಾಡಿದ ಆರೋಪಿಗಳು. ರಘು ರೆಡ್ಡಿ ಹಾಗೂ ರಾಹುಲ್‌ ರೆಡ್ಡಿ ಗ್ಯಾರೇಜ್ ನಡೆಸುತ್ತಿದ್ದಾರೆ.

ಆರೋಪಿ ಮೆಹಬೂಬ್‌ ಪಟೇಲ್‌ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನು. ರಾಹುಲ್ ರೆಡ್ಡಿ ಬೈಕ್ ಮೇಲೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಬಳಿಕ ರಾಹುಲ್​ ರೆಡ್ಡಿ ಲಾರಿಯನ್ನು ರಸ್ತೆ ಮಧ್ಯದಲ್ಲಿ ಏಕೆ ನಿಲ್ಲಿಸಿರುವೆ ಎಂದು ಮೇಹಬೂಬ್​ ಪಟೇಲ್​ನನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಮೇಹಬೂಬ್ ಪಟೇಲ್ “ನಾನು ಲಾರಿ ಎಲ್ಲಿ ಬೇಕಾದರೂ ನಿಲ್ಲಿಸುತ್ತೇನೆ ನಿನ್ಯಾವನೋ ಕೇಳವನು” ಅಂತ ಅವಾಜ್ ಹಾಗಿದ್ದಾನೆ. ಬಳಿಕ ರಾಹುಲ್​ ಅವರಿಗೆ ಮೇಹಬೂಬ್ ಪಟೇಲ್ ಅವಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ

ಇಬ್ಬರ ಮಧ್ಯೆ ಗಲಾಟೆ ವಿಚಾರ ತಿಳಿದು ರಾಹುಲ್ ಸಹೋದರ ರಘು ಸ್ಥಳಕ್ಕೆ ಬಂದಿದ್ದಾನೆ. ನಂತರ ಮೇಹಬೂಬ್ ಪಟೇಲ್ ಸ್ನೇಹಿತರಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್, ಮೇಹಬೂಬ್ ಪಟೇಲ್, ಶೇಖ್ ಸಮೀರ್ ಸ್ಥಳಕ್ಕೆ ಬಂದು ಸಾರ್ವಜನಿಕವಾಗಿ ಏಕಾ ಎಕಿ ಸಹೋದರ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕರ ಮೇಲೆ ಹಲ್ಲೆ ಮಾಡಿದ ವಿಡಿಯೋ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಾಳು ರಘು ರೆಡ್ಡಿಯನ್ನು ಕಲಬುರಗಿಯಲ್ಲಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸೇಡಂ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್‌, ಲಾರಿ ಚಾಲಕ ಮೇಹಬೂಬ್, ಸಮೀರ್​ನನ್ನು ಬಂಧಿಸಿದ್ದಾರೆ. ಎ1 ಆರೋಪಿ ಸೈಯದ್ ಸಮೀರ್ ಸೇರಿದಂತೆ ಇನ್ನೂ ಹಲವರು ಪರಾರಿಯಾಗಿದ್ದಾರೆ.

ಲಾರಿ ಡಿಕ್ಕಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಕುಂದಾಪುರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರಯಾವಾಗಿದೆ. ಇನ್ನೂಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲ್ಲೂರು ಪ್ರವಾಸಿ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ನಡೆದಿದೆ. ಬೈಂದೂರುನಿಂದ ಕುಂದಾಪುರ ದ ಕಡೆಗೆ ಬರುತ್ತಿದ್ದ ಬಸ್​ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್​ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Sat, 10 August 24