AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸರಣಿ ಅಪಘಾತದಲ್ಲಿ ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ನಾಲ್ವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಸರಣಿ ಅಪಘಾತದಲ್ಲಿ ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Oct 17, 2024 | 8:59 AM

Share

ಕಲಬುರಗಿ, ಅಕ್ಟೋಬರ್​ 17: ಜೇವರ್ಗಿ (Jevargi) ತಾಲೂಕಿನ ಹಸನಾಪುರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್, ಕಾರು, ಲಾರಿ‌ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ (45) ಮೃತರು. ಕಾರು ರಾಯಚೂರು (Raichur) ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು. ಬೈಕ್‌ನಲ್ಲಿದ್ದ ಪರಮಾನಂದ ಎಂಬುವರಿಗೆ ಮತ್ತು ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ನಾಲ್ವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಅಪಘಾತ: ಬೈಕ್​ ಸವಾರರು ಸಾವು

ಬೆಂಗಳೂರು: ದೇವಿನಗರ ಬಸ್ ನಿಲ್ದಾಣ ಬಳಿ ಇರುವ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್​​ ಸವಾರರು ಮೃತಪಟ್ಟಿದ್ದಾರೆ. ಬೈಕ್​​ ಸವಾರರು ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಬೈಕ್​ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರಲ್ಲಿ ಓರ್ವನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ.

ಯುವಕರು ಚಾಕುತೋರಿಸಿ ದರೋಡೆ ಮಾಡುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಹೆಬ್ಬಾಳ‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸಾವು

ದಾವಣಗೆರೆ: ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಗುಡ್ಡದಕುಮಾರನಹಳ್ಳಿ ಬಳಿ ನಡೆದಿದೆ. ರಮೇಶ್ ಹಾಲೇಶಪುರ (21), ರಮೇಶ್​ ಜಮ್ಮನಹಳ್ಳಿ (22) ಮೃತ ದುರ್ದೈವಿಗಳು. ಘಟನೆ ಖಂಡಿಸಿ ಗುಡ್ಡದ ಕುಮಾರನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:49 am, Thu, 17 October 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More