ಅತ್ತ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಇತ್ತ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ದಿನ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಬೆಳಗಾವಿ ಅಧಿವೇಶದನಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಆದ್ರೆ, ಇತ್ತ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ.

ಅತ್ತ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಇತ್ತ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವು
Maternal Death In Kalaburagi
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 17, 2024 | 3:48 PM

ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಈ ಪ್ರಕರಣ ಪ್ರತಿಧ್ವನಿಸಿದೆ. ಇದರ ಮಧ್ಯಯೇ ಇತ್ತ ಕಲಬುರಗಿಯಲ್ಲಿ ಮತ್ತೋರ್ವ ಬಾಣಂತಿ ಸಾವಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ ನಿವಾಸಿ ಭಾಗ್ಯಶ್ರೀ(22) ಮಗುವಿಗೆ ಜನ್ಮ ನೀಡಿ ಬಳಿಕ ಕೊನೆಯುಸಿರೆಳೆದಿದ್ದಾರೆ.

ಆಳಂದ ತಾಲೂಕಿನ ಮಟಕಿ ಗ್ರಾಮದ ನಿವಾಸಿ ಭಾಗ್ಯಶ್ರೀ(22) ಅವರು ಹೆರಿಗೆಗಾಗಿ ನಿನ್ನೆ (ಡಿಸೆಂಬರ್ 17) ಮಧ್ಯಾಹ್ನ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು(ಡಿಸೆಂಬರ್ 17) ಬೆಳಗ್ಗೆ 8 ಗಂಟೆಗೆ ಗಂಡು ಮಗುವಿಗೆ ಜನ್ಮನೀಡಿದ್ದಾಳೆ. ನಂತರ ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ. ಹೆರಿಗೆ ನಂತರ ರಕ್ತದೊತ್ತಡ ಕಡಿಮೆಯಿದೆ ಎಂದು ಅಫಜಲಪುರ ಸರ್ಕಾರಿ ಆಸ್ಪತ್ರೆ ವೈದ್ಯರು, ಜಿಮ್ಸ್​ಗೆ ರವಾನಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಭಾಗ್ಯಶ್ರೀ ಗುಲಬರ್ಗಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಸಾವವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸಾವು: ಆರೋಗ್ಯ ಸಚಿವ ಗುಂಡೂರಾವ್​ ಬಿಚ್ಚಿಟ್ಟ ಸತ್ಯ ಏನು? ಇಲ್ಲಿದೆ ಓದಿ

ಇಂದು ಮುಂಜಾನೆ ಅಫಜಲಪುರದ ತಾಲೂಕು ಆಸ್ಪತ್ರೆಯಲ್ಲಿ ಭಾಗ್ಯಶ್ರೀಗೆ ಹೆರಿಗೆಯಾಗಿತ್ತು. ಭಾಗ್ಯಶ್ರೀಗೆ ಇದು ಎರಡನೇ ಹೆರಿಗೆ. ಅತಿಯಾದ ರಕ್ತಸ್ರಾವ, ಲೋ ಬಿಪಿಯಾಗಿತ್ತು. ಹೀಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಜಿಮ್ಸ್ ಗೆ ಕರೆದುಕೊಂಡು ಬಂದುಅಡ್ಮಿಟ್ ಮಾಡಲಾಗಿದ್ದು, ಎರಡು ಯುನಿಟ್ ರಕ್ತ ಸಹ ಏರಿಸಲಾಗಿದೆ. ಆದರೂ ಲೋ ಬಿಪಿಯಿಂದ ಮೃತಟ್ಟಿದ್ದಾಳೆ ಎಂದು ತಿಳಿದುಬಂದಿದೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಜಿಮ್ಸ್ ಆಸ್ಪತ್ರೆ ವೈದ್ಯರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿವೇಶನದಲ್ಲೂ ಪ್ರತಿಧ್ವನಿಸಿದ ಬಾಣಂತಿಯರ ಸಾವು ಪ್ರಕರಣ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯ ಸಾವು ವಿಚಾರವಾಗಿ ಪ್ರಸ್ತು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಿತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಪರಿಷತ್​ನಲ್ಲಿ​ ಉತ್ತರ ನೀಡಿದ್ದು, ನವೆಂಬರ್​ 11 ರಿಂದ ಬಿಮ್ಸ್​ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 9, 10 ಮತ್ತು 11 ಮೂರು ದಿನಗಳಲ್ಲಿ 34 ಸಿಸೇರಿಯನ್ ಶಸ್ತ್ರಚಿಕಿತ್ಸೆಗಳಾಗಿವೆ. ಶಸ್ತ್ರಚಿಕಿತ್ಸೆ ಬಳಿಕ ಏಳು ಮಂದಿ ಬಾಣಂತಿಯರಿಗೆ ತೊಂದರೆಯಾಗಿದ್ದು, ಇದರಲ್ಲಿ ಐವರು ಮೃತಪಟ್ಟಿದ್ದಾರೆ. ಘಟನೆ ವರದಿಯಾದ ಕೂಡಲೇ ನುರಿತ ವೈದ್ಯರ ತಂಡವನ್ನು ರಚನೆ ಮಾಡಿ, ತನಿಖೆ ನಡೆಸಲಾಯಿತು. ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣದ 1 ಹೊಸ ಬ್ಯಾಚ್ ​ಅನ್ನು ನವೆಂಬರ್‌ 9 ರಂದು ಬಳಸಲಾಗಿದೆ. ಇದರಿಂದ ತೊಂದರೆಯಾಗಿರಬಹುದು ಎಂದು ವೈದ್ಯರ ತಂಡ ಹೆಚ್ಚು ಸಂಶಯವನ್ನು ವ್ಯಕ್ತಪಡಿಸಿದರು ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು