ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು

ರೈತರು ನಿಗಧಿತ ಅವಧಿಯಲ್ಲಿ “ಗ್ರಾಮ ಒನ್ ” ಅಥವಾ “ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ರೈತರನ್ನು ಎಚ್ಚರಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು
ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 24, 2022 | 10:01 PM

ಕಲಬುರಗಿ: ಪಿ.ಎಂ.-ಕಿಸಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ (PM Kisan Samman Yojana installment) ಪಡೆಯಲು ಬಯೋಮೆಟ್ರಿಕ್ ಆಧಾರಿತ ಇ-ಕೆ.ವೈ.ಸಿ (E KYC) ಮಾಡುವುದು ಕಡ್ಡಾಯವಾಗಿದೆ. ಆಗಸ್ಟ್ 31ರೊಳಗೆ ಕೆ.ವೈ.ಸಿ. ಮಾಡಿಸುವಂತೆ ಜಿಲ್ಲೆಯ ರೈತ ಬಾಂಧವರಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಮನವಿ ಮಾಡಿದ್ದಾರೆ (Narendra Modi).

ಪಿ.ಎಂ. ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಣಿಯಾದ 2,68,015 ರೈತರ ಪೈಕಿ 99,545 ರೈತರು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ರೈತರು ನಿಗಧಿತ ಅವಧಿಯಲ್ಲಿ “ಗ್ರಾಮ ಒನ್ ” ಅಥವಾ “ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು ಕಳೆದ ವರ್ಷ ಈ ಯೋಜನೆಯಡಿ ರೈತರಿಗೆ 772 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದರು.

ಪ್ರಸಕ್ತ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2,14,749 ಜನ ರೈತರು ದಾಖಲೆ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ನಿರ್ದಿಷ್ಟ ವಿಕೋಪದಡಿ 40,527 ರೈತರು ದೂರು ನೀಡಿರುವ ಹಿನ್ನೆಲೆಯಲ್ಲಿ 24,551 ರೈತರ ಹೊಲದಲ್ಲಿ ಜಂಟಿ ಸಮೀಕ್ಷೆ ನಡೆಸಿದ್ದು, 16,476 ರೈತರ ಬೆಳೆಗಳು ಸಮೀಕ್ಷೆಗೆ ಬಾಕಿ ಇವೆ.

ಮಳೆ ಬಿದ್ದ ನಂತರ 72 ಗಂಟೆ ಒಳಗಾಗಿ ರೈತರು ಟೋಲ್ ಫ್ರೀ ಸಂಖ್ಯೆ 100-200-5142ಗೆ ಕರೆ ಮಾಡಿ ದೂರು ನೀಡಿದಲ್ಲಿ ವಿಮಾ ಕಂಪನಿಯವರು ಸಮೀಕ್ಷೆಗೆ ಬರುತ್ತಾರೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಲ್ ಸೆಂಟರ್ ತೆರೆಯಲಾಗುವುದು, ಕಳೆದ ವರ್ಷ ಈ ವಿಮೆ ಯೋಜನೆಯಡಿ ಜಿಲ್ಲೆಯ 9 ಸಾವಿರ ಜನರಿಗೆ ಪರಿಹಾರ ಕಲ್ಪಿಸಿದ ಎಂದು ಡಿ.ಸಿ. ಯಶವಂತ ಎ. ಗುರುಕರ್ ತಿಳಿಸಿದರು.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ