PM Modi Karnataka visit: ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ -ಕಾರ್ಯಕ್ರಮ ಗಿನ್ನಿಸ್ ರೆಕಾರ್ಡ್ ಗೆ ಸೇರಲಿದೆ ಎಂದ ಕಂದಾಯ ಸಚಿವ ಆರ್ ಅಶೋಕ್, ಏನಂತಹ ವಿಶೇಷ?

guinness record: ಇನ್ನು ಮಳಖೇಡ್ ನಲ್ಲಿ 60 ಎಕರೆ ವಿಸ್ತೀರ್ಣದಲ್ಲಿ ವೇದಿಕೆ ನಿರ್ಮಾಣವಾಲಾಗಿದ್ದು,  1.5 ಲಕ್ಷ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.  ಫಲಾನುಭವಿಗಳನ್ನು ಕರೆತರಲು 2,300 ಬಸ್ ಗಳ ವ್ಯವಸ್ಥೆಯನ್ನು ಸರ್ಕಾರದ ವತಿಯಿಂದಲೇ ಮಾಡಲಾಗಿದೆ. 

PM Modi Karnataka visit: ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ -ಕಾರ್ಯಕ್ರಮ ಗಿನ್ನಿಸ್ ರೆಕಾರ್ಡ್ ಗೆ ಸೇರಲಿದೆ ಎಂದ ಕಂದಾಯ ಸಚಿವ ಆರ್ ಅಶೋಕ್, ಏನಂತಹ ವಿಶೇಷ?
ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿImage Credit source: ANI
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 19, 2023 | 6:29 AM

ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳದಿವೆ. ಈಗಾಗಲೇ ರಾಜ್ಯದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಭಾಗಕ್ಕೆ ಬಂದು ಹೋಗಿರುವ ಪ್ರಧಾನಿ ಮೋದಿ, ನಾಳೆ ಕಲ್ಯಾಣ ಕರ್ನಾಟಕದ ಕಲಬುರಗಿ (Kalaburagi) ಮತ್ತು ಯಾದಗಿರಿ (Yadgir) ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಎರಡು ಜಿಲ್ಲೆಯಲ್ಲಿ ನಡೆಯಲಿರೋ ಎರಡು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳು ಕೇಸರಿಮಯವಾಗಿವೆ. ಸ್ವತ ಮೋದಿ ಅವರೇ (PM Narendra Modi) ರಾಜ್ಯಕ್ಕೆ ಬರ್ತಾಯಿರೋ ಖುಷಿಯನ್ನು ಹಂಚಿಕೊಂಡಿದ್ದಾರೆ. ಎಲ್ಲಡೆ ರಾರಾಜಿಸುತ್ತಿರುವ ಕೇಸರಿ ಧ್ವಜಗಳು. ಮತ್ತೊಂದಡೆ ಕಾರ್ಯಕ್ರಮಕ್ಕಾಗಿ ನಿರ್ಮಾಣವಾಗಿರೋ ಬೃಹತ್ ವೇದಿಕೆ. ಮತ್ತೊಂದಡೆ ಪೊಲೀಸರ ಸರ್ಪಗಾವಲು. ಇಂತಹದೊಂದು ಬೃಹತ್ ವೇದಿಕೆ, ಪೊಲೀಸರ ಸರ್ಪಗಾವಲಿಗೆ ಕಾರಣ, ನಾಳೆ ಪ್ರಧಾನಿ ಮೋದಿ ಅವರು ಆಗಮನ. ಹೌದು ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹೌದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ್ ನಲ್ಲಿ, ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು (Karnataka Tanda Development Board), ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಯ 52 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮತ್ತೊಂದಡೆ ಯಾದಗಿರಿ ಜಿಲ್ಲೆಯ ಕೊಡೆಕಲ್ ನಲ್ಲಿ ವಿವಿಧ ನೀರಾವರಿ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದ್ದು, ಎರಡು ಜಿಲ್ಲೆಯಲ್ಲಿನ ಎರಡು ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ (an event to distribute title deeds to residents of Lambani Tandas).

ಇನ್ನು ದೆಹಲಿಯಿಂದ ಇಂದು ಗುರುವಾರ ಮುಂಜಾನೆ 9 ಕ್ಕೆ ಹೊರಡಲಿರೋ ಪ್ರಧಾನಿ, ಮುಂಜಾನೆ ಹನ್ನೊಂದು ಗಂಟೆಗೆ, ಕಲಬುರಗಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಕಲಬುರಗಿಯಿಂದ ಯಾದಗಿರಿ ಜಿಲ್ಲೆಯ ಕೊಡೆಕಲ್ ಗೆ ಎಮ್ 17 ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಲಿದ್ದು, ಕೊಡೆಕಲ್ ನಲ್ಲಿ ಮಧ್ಯಾಹ್ನ 12 ಕ್ಕೆ ಕೊಡೆಕಲ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಕೊಡೆಕಲ್ ನಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆವರಗೆ ನಡೆಯಲಿರೋ ಸರ್ಕಾರಿ ಕಾರ್ಯಕ್ರಮದಲ್ಲಿ ಬಾಗಿಯಾಗಲಿದ್ದು, ವಿವಿಧ ನೀರವಾರಿ ಯೋಜನೆಗಳಿಗೆ ಜಾಲನೆ ನೀಡಲಿದ್ದಾರೆ.

ಮಧ್ಯಾಹ್ನ ಒಂದು 1-15 ಕ್ಕೆ ಕೊಡೆಕಲ್ ನಿಂದ ಹೊರಡಲಿರೋ ಪ್ರಧಾನಿ, ಮಧ್ಯಾಹ್ನ ಎರಡು ಗಂಟೆಗೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ್ ನಲ್ಲಿ ನಿರ್ಮಾಣ ಮಾಡಿರೋ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 -15 ರಿಂದ 3 ಗಂಟೆ ವರಗೆ ಮಳಖೇಡ್ ನಲ್ಲಿ ನಡೆಯಲಿರೋ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಮಳಖೇಡ್ ನಿಂದ ಹೊರಡಲಿದ್ದು, 3-30 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮತ್ತೆ ಇಲ್ಲಿಂದ ವಿಶೇಷ ವಿಮಾನದ ಮೂಲಕ ಮುಂಬೈ ಗೆ ಪ್ರಯಾಣ ಬೆಳಸಲಿದ್ದಾರೆ. ಇನ್ನು ಮಳಖೇಡ್ ನಲ್ಲಿ ನಡೆಯಲಿರೋ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ಸರಿಸುಮಾರು ಮೂರು ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಪ್ರಧಾನಿ ಮೋದಿನ ಇಂಚಿಂಚು ಕಾರ್ಯಕ್ರಮದ ವಿವರ ನೀಡಿದರು.

ಇನ್ನು ಮಳಖೇಡ್ ನಲ್ಲಿ 60 ಎಕರೆ ವಿಸ್ತೀರ್ಣದಲ್ಲಿ ಪ್ರಧಾನ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸರಿಸುಮಾರು 1.5 ಲಕ್ಷ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು ಫಲಾನುಭವಿಗಳನ್ನು ಕರೆತರಲು 2,300 ಬಸ್ ಗಳ ವ್ಯವಸ್ಥೆಯನ್ನು ಸರ್ಕಾರದ ವತಿಯಿಂದಲೇ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರೋರಿಗೆ ಪಲಾವ್, ಮೈಸೂರು ಪಾಕ್ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮೂಲದ ಕೆಟರಿಂಗ್ ಸಂಸ್ಥೆಗೆ ಗುತ್ತಿಗೆ ನೀಡಿದ್ದು, ಈಗಾಗಲೇ ಐನೂರಕ್ಕೂ ಹೆಚ್ಚು ಸಿಬ್ಬಂದಿ ಅಡುಗೆ ಕೆಲಸದಲ್ಲಿ ನಿರತರಾಗಿದ್ದಾರೆ.

ಇಂದಿನ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕಂದಾಯ ಸಚಿವ ಆರ್ ಅಶೋಕ್ ಸೇರಿ, ಸ್ಥಳೀಯ ಶಾಸಕರು, ಸಂಸದ ಸೇರಿ 18 ಜನರಿಗೆ ವೇದಿಕೆ ಮೇಲೆ ಪ್ರಧಾನಿ ಜೊತೆ ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ನಡೆಯೋ ಕಾರ್ಯಕ್ರಮ ಗಿನ್ನಿಸ್ ರೆಕಾರ್ಡ್ ( guinness world record)ಗೆ ಸೇರಲಿದೆ ಅಂತ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಏಕ ಕಾಲದಲ್ಲಿ ಒಂದೇ ಕಡೆ 52 ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡ್ತಾಯಿರುವುದು ಇದೇ ಮೊದಲು. ಹಾಗಾಗಿ ಇಂದಿನ ಕಾರ್ಯಕ್ರಮ ಗಿನ್ನಿಸ್ ರೆಕಾರ್ಡ್ ಆಗುತ್ತದೆ ಅಂತ ಹೇಳಿದ್ದಾರೆ.

ಇನ್ನು ರಾಜ್ಯಕ್ಕೆ ಬರ್ತಿರೋ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು ಸಂತಸವನ್ನು ಹಂಚಿಕೊಂಡಿದ್ದಾರೆ. ಕರ್ನಾಟಕದ ಜನತೆ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಈ ಕಾಮಗಾರಿಗಳು ಜಲಶಕ್ತಿ ರಸ್ತೆಗಳನ್ನು ಒಳಗೊಂಡಿವೆ. ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವದು ಅಂತ ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

ಇನ್ನು ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೂಬಸ್ಥ ಕೂಡಾ ಏರ್ಪಡಿಸಲಾಗಿದೆ. ಈಗಾಗಲೇ 5 ಜನ ಎಸ್ಪಿ, 20 ಡಿವೈಎಸ್ಪಿ, 50 ಸಿಪಿಐ, 162 ಪಿಎಸ್ಐ, ಆರು ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಎರಡುವರೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸರ್ಕಾರ ಮತ್ತು ಪೊಲೀಸರು ಮಾಡಿಕೊಂಡಿದ್ದಾರೆ.

ವರದಿ: ಸಂಜಯ್, ಟಿವಿ 9, ಕಲಬುರಗಿ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್