AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.19 ರಂದು ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಇಲ್ಲಿದೆ ಯಾದಗಿರಿ, ಕಲಬುರಗಿ ಜಿಲ್ಲಾ ಪ್ರವಾಸ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 19ರಂದು ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಎರಡು ಜಿಲ್ಲೆಯ ಮೋದಿ ಪ್ರವಾಸದ ವೇಳಾಪಟ್ಟಿ ಹೀಗಿದೆ.

ಜ.19 ರಂದು ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಇಲ್ಲಿದೆ ಯಾದಗಿರಿ, ಕಲಬುರಗಿ ಜಿಲ್ಲಾ ಪ್ರವಾಸ ವೇಳಾಪಟ್ಟಿ
ಯಾದಗಿರಿ, ಪ್ರಧಾನಿ ಮೋದಿ, ಕಲಬುರಗಿ ವಿಮಾನ ನಿಲ್ದಾಣ
TV9 Web
| Edited By: |

Updated on: Jan 17, 2023 | 12:06 PM

Share

ಯಾದಗಿರಿ/ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜನವರಿ 19ರಂದು ಕಲ್ಯಾಣ ಕರ್ನಾಟಕ (Kalyana Karnataka) ಯಾದಗಿರಿ (Ydgiri) ಮತ್ತು ಕಲಬುರಗಿ (Kalaburagi) ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆ ಎರಡು ಜಿಲ್ಲೆಯ ಮೋದಿ ಪ್ರವಾಸದ ವೇಳಾಪಟ್ಟಿ ಇಲ್ಲಿದೆ.

ಯಾದಗಿರಿ ಜಿಲ್ಲೆ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ ಗ್ರಾಮದ ಹೆಲಿಪ್ಯಾಡ್​ಗೆ ತೆರಳುತ್ತಾರೆ. ಮಧ್ಯಾಹ್ನ 12 ಗಂಟೆಗೆ ಕೊಡೆಕಲ್​ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನೈ ಎಕ್ಸ್​​ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ಮಾಡುತ್ತಾರೆ.

ಇದನ್ನೂ ಓದಿ: ಜ. 19 ಕಲಬುರಗಿಗೆ ಪ್ರಧಾನಿ ಮೋದಿ ಪ್ರವಾಸ ಫಿಕ್ಸ್, ತವರಿನಲ್ಲಿ ಖರ್ಗೆಗೆ ಟಕ್ಕರ್ ಕೊಡಲು ಕಮಲ ನಾಯಕರು ಸಜ್ಜು

ಕಲಬುರಗಿ ಜಿಲ್ಲಾ ಪ್ರವಾಸ

ಕೊಡೆಕಲ್​ ಗ್ರಾಮದಿಂದ ಮಧ್ಯಾಹ್ನ 01.05ಕ್ಕೆ ನಿರ್ಗಮಿಸಿ, 01.10 ಕ್ಕೆ ಕೊಡೆಕಲ್ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್​ನಲ್ಲಿ ಮಧ್ಯಾಹ್ನ 2 ಗಂಟೆಗೆ ಇಳಿಯಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್​ಪೋರ್ಟ್​​ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್​ಪೋರ್ಟ್​​ನಿಂದ ದೆಹಲಿಗೆ ನಿರ್ಗಮಿಸುತ್ತಾರೆ.

ಇದನ್ನೂ ಓದಿ: ಜನವರಿ 19 ರಂದು ಪ್ರಧಾನಿ ಮೋದಿ ಯಾದಗಿರಿಗೆ: ಹುಣಸಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಮೋದಿ ಕಾರ್ಯಕ್ರಮ ಹಿನ್ನೆಲೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್‌ನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಹುಣಸಗಿ ಪಟ್ಟಣದಿಂದ ನಾರಾಯಣಪುರ ಗ್ರಾಮಕ್ಕೆ ಹೋಗುವ ವಾಹನಗಳು ಜ. 18 ಮತ್ತು 19 ಎರಡು ದಿನ ಬದಲಿ ಮಾರ್ಗದ ಮೂಲಕ ಸಂಚರಿಸಬೇಕು.

ಹುಣಸಗಿಯಿಂದ ನಾರಾಯಣಪುಕ್ಕೆ ಹೋಗಬೇಕು ಅಂದ್ರೆ ಕೊಡೆಕಲ್ ಮಾರ್ಗವಾಗಿ ಹೋಗಬೇಕು. ಆದರೆ ಮೋದಿ ಕಾರ್ಯಕ್ರಮ ಹಿನ್ನೆಲೆ ಹುಣಸಗಿಯಿಂದ ನಾರಾಯಣಪುರಕ್ಕೆ ಹೋಗುವ ವಾಹನಗಳಿಗೆ ಬಲಶೆಟ್ಟಿಹಾಳ್, ಗೆದ್ದಲಮರಿ, ಜೋಗುಂಡಬಾವಿ ಮಾರ್ಗವಾಗಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾರಾಯಣಪುರದಿಂದ ಹುಣಸಗಿಗೆ ಬರಬೇಕಾದರೂ ಇದೇ ಮಾರ್ಗದ ಮೂಲಕ ಬರಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ