ಯಾದಗಿರಿ/ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜನವರಿ 19ರಂದು ಕಲ್ಯಾಣ ಕರ್ನಾಟಕ (Kalyana Karnataka) ಯಾದಗಿರಿ (Ydgiri) ಮತ್ತು ಕಲಬುರಗಿ (Kalaburagi) ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆ ಎರಡು ಜಿಲ್ಲೆಯ ಮೋದಿ ಪ್ರವಾಸದ ವೇಳಾಪಟ್ಟಿ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಜ.19 ಬೆಳಗ್ಗೆ 11ಕ್ಕೆ ನವದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಹೆಲಿಪ್ಯಾಡ್ಗೆ ತೆರಳುತ್ತಾರೆ. ಮಧ್ಯಾಹ್ನ 12 ಗಂಟೆಗೆ ಕೊಡೆಕಲ್ ಗ್ರಾಮದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇ ಪ್ಯಾಕೇಜ್-3 ಕಾಮಗಾರಿಗೆ ಶಂಕುಸ್ಥಾಪನೆ ಮಾಡುತ್ತಾರೆ.
ಇದನ್ನೂ ಓದಿ: ಜ. 19 ಕಲಬುರಗಿಗೆ ಪ್ರಧಾನಿ ಮೋದಿ ಪ್ರವಾಸ ಫಿಕ್ಸ್, ತವರಿನಲ್ಲಿ ಖರ್ಗೆಗೆ ಟಕ್ಕರ್ ಕೊಡಲು ಕಮಲ ನಾಯಕರು ಸಜ್ಜು
ಕೊಡೆಕಲ್ ಗ್ರಾಮದಿಂದ ಮಧ್ಯಾಹ್ನ 01.05ಕ್ಕೆ ನಿರ್ಗಮಿಸಿ, 01.10 ಕ್ಕೆ ಕೊಡೆಕಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಹೆಲಿಪ್ಯಾಡ್ನಲ್ಲಿ ಮಧ್ಯಾಹ್ನ 2 ಗಂಟೆಗೆ ಇಳಿಯಲಿದ್ದಾರೆ. ಮಳಖೇಡನಲ್ಲಿ ಮಧ್ಯಾಹ್ನ 02.15ಕ್ಕೆ ನಡೆಯುವ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ, ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಳಖೇಡ ಕಾರ್ಯಕ್ರಮ ಸ್ಥಳದಿಂದ ನಿರ್ಗಮಿಸಿ, 03.05ಕ್ಕೆ ಹೆಲಿಕಾಪ್ಟರ್ ಮೂಲಕ ಕಲಬುರಗಿ ಏರ್ಪೋರ್ಟ್ಗೆ ಹೋಗುತ್ತಾರೆ. ಅಲ್ಲಿಂದ 03.35ಕ್ಕೆ ಕಲಬುರಗಿ ಏರ್ಪೋರ್ಟ್ನಿಂದ ದೆಹಲಿಗೆ ನಿರ್ಗಮಿಸುತ್ತಾರೆ.
ಇದನ್ನೂ ಓದಿ: ಜನವರಿ 19 ರಂದು ಪ್ರಧಾನಿ ಮೋದಿ ಯಾದಗಿರಿಗೆ: ಹುಣಸಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್‌ನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಹುಣಸಗಿ ಪಟ್ಟಣದಿಂದ ನಾರಾಯಣಪುರ ಗ್ರಾಮಕ್ಕೆ ಹೋಗುವ ವಾಹನಗಳು ಜ. 18 ಮತ್ತು 19 ಎರಡು ದಿನ ಬದಲಿ ಮಾರ್ಗದ ಮೂಲಕ ಸಂಚರಿಸಬೇಕು.
ಹುಣಸಗಿಯಿಂದ ನಾರಾಯಣಪುಕ್ಕೆ ಹೋಗಬೇಕು ಅಂದ್ರೆ ಕೊಡೆಕಲ್ ಮಾರ್ಗವಾಗಿ ಹೋಗಬೇಕು. ಆದರೆ ಮೋದಿ ಕಾರ್ಯಕ್ರಮ ಹಿನ್ನೆಲೆ ಹುಣಸಗಿಯಿಂದ ನಾರಾಯಣಪುರಕ್ಕೆ ಹೋಗುವ ವಾಹನಗಳಿಗೆ ಬಲಶೆಟ್ಟಿಹಾಳ್, ಗೆದ್ದಲಮರಿ, ಜೋಗುಂಡಬಾವಿ ಮಾರ್ಗವಾಗಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾರಾಯಣಪುರದಿಂದ ಹುಣಸಗಿಗೆ ಬರಬೇಕಾದರೂ ಇದೇ ಮಾರ್ಗದ ಮೂಲಕ ಬರಬೇಕು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ