ಇಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಲಬುರಗಿ ಜಿಲ್ಲೆಗೆ ಎರಡು ಬಾರಿ ಆಗಮಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಕಲಬುರಗಿಗೆ ಆಗಮಿಸಿ ಇಲ್ಲಿಂದ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ಅಲ್ಲಿಂದ ಮತ್ತೆ ಕಲಬುರಗಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿ ಇಲ್ಲಿಂದ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.

ಇಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ
ಇಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧImage Credit source: PTI
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Jan 19, 2024 | 7:12 AM

ಕಲಬುರಗಿ, ಜ.19: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಕಲಬುರಗಿಗೆ (Kalaburagi) ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ (PMAY) ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜಿಲ್ಲೆಗೆ ಆಗಮಿಸಿ ಇಲ್ಲಿಂದ ಹೆಲಿಕಾಫ್ಟರ್ ಮೂಲಕ ತೆರಳಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಡ್ರೋನ್ ಕ್ಯಾಮೆರಾಗಳ ಹಾರಾಟ ನಿಷೇಧಿಸಲಾಗಿದೆ.

ಕಲಬುರಗಿ ಏರ್‌ಪೋರ್ಟ್ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಡ್ರೋಣ್ ಕ್ಯಾಮರಾ ಬಳಕೆಯನ್ನು ಜಿಲ್ಲಾಡಳಿತವು ನಿಷೇಧಿಸಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯಾರು ಕೂಡ ‌ಡ್ರೋಣ್ ಹಾರಿಸುವಂತಿಲ್ಲ.

ಇದನ್ನೂ ಓದಿ: ಇಂದು ಬೆಂಗಳೂರಿಗೆ ಮೋದಿ ಆಗಮನ: ಪ್ರಧಾನಿ ಸಂಚರಿಸುವ ಈ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮೋದಿ ಅವರು ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಲ್ಲಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಭಾರತೀಯ ವಾಯುಸೇನೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಮತ್ತೆ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಕಲಬುರಗಿಯಲ್ಲಿ ಮೋದಿ ಭೇಟಿಗೆ ಅವಕಾಶ

ಸೊಲ್ಲಾಪುರದಿಂದ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಏರ್​ಪೋರ್ಟ್​ಗೆ ವಾಪಸ್ ಆಗಲಿರುವ ಪ್ರಧಾನಿ ಮೋದಿ ಅವರನ್ನು ಸ್ಥಳೀಯ ಬಿಜೆಪಿ ನಾಯಕರ ಭೇಟಿಗೆ ಅವಕಾಶ ನೀಡಲಾಗಿದೆ. ಕಲಬುರಗಿ ಭಾಗದ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆ ಸಿದ್ಧತೆ ಸೇರಿ ಹಲವು ವಿಷಯಗಳ ಬಗ್ಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ