ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು; ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು
ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷ 81 ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಕೇವಲ ಆಗಸ್ಟ್ ತಿಂಗಳಲ್ಲೇ 90 ಪ್ರಕರಣಗಳು ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ. ಅಧಿಕಾರಿಗಳು ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಕಲಬುರಗಿ, ಅ.02: ಕಳೆದ ಕೆಲ ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ(Pocso). ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ 81 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳು ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿವೆ. 2023-2024ರಲ್ಲಿ 90 ಪ್ರಕರಣಗಳು ಬೆಳಕಿಗೆ ಬಂದಿವೆ. ಆಗಸ್ಟ್ 2024ರ ಅಂತ್ಯದ ವೇಳೆಗೆ, 60 ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ.
ಇನ್ನು, ಅಧಿಕಾರಿಗಳು ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಘಟನೆಗಳನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಿಯಂತ್ರಿಸಲು ಪೋಕ್ಸೋ ಕಾಯ್ದೆಯನ್ನು ತರಲಾಗಿದ್ದು, ಈ ಕಾಯ್ದೆಯಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಲಿದೆ.
ಹಲವು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅನೇಕ ಸಂದರ್ಭಗಳಲ್ಲಿ, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದಲೇ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ವರದಿಗಳೇ ಹೆಚ್ಚು.
ಇದನ್ನೂ ಓದಿ: ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಘಟನೆ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌ಡಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೊಲೀಸರು, ಎನ್‌ಜಿಒಗಳೊಂದಿಗೆ ಸೇರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರು ಸಹ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಥೋಡ್ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳ ಜೊತೆ ಪಾಲಕರು ಕೈಜೋಡಿಸಬೇಕಾದ ಅಗತ್ಯ ಇದೆ ಎಂದು ತಿಳಿಸಿದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ