ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್

ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಸೆನ್ ಪೊಲೀಸ್(CEN Police) ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ(Bribe) ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್
ಕಲಬುರಗಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 10:16 AM

ಕಲಬುರಗಿ: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಸೆನ್ ಪೊಲೀಸ್(CEN Police) ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ (Bribe) ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ. ಹೌದು ಸೆನ್ ಪೊಲೀಸ್ ಠಾಣೆಯಲ್ಲಿ ಸಂಜನಾ ಬೀರಪ್ಪಾ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಕ್ಕಲಪ್ಪ. ಅರ್ಜಿ ತನಿಖೆಯಲ್ಲಿ ದೂರುದಾರರ ಹೆಸರು ಕೈ ಬಿಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ವೇಳೆ ಲೋಕಾಯುಕ್ತ ಎಸ್​.ಪಿ ಎಆರ್ ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಬಳಿಕ ಲಂಚ ಸ್ವಿಕರಿಸುತ್ತಿದ್ದ ಕಾನ್ಸಟೇಬಲ್ ಮುಕ್ಕಲಪ್ಪನನ್ನ ಬಂಧಿಸಲಾಗಿದೆ.

ದಾವಣಗೆರೆ: 13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಮೇಶ್ವರ್​​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎನ್ನುವರ ಬಳಿ ಪರಮೇಶ್ವರ್ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಿನ್ನೆ ರಾತ್ರಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಂಜುನಾರ್​ನಿಂದ 13 ಸಾವಿರ ಲಂಚ ಪಡೆಯುವಾಗ ಪರಮೇಶ್ವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅರೋಪಿಯಿಂದ 40 ಸಾವಿರ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್​ಪಿ, ಎಂಎಸ್ ಕೌಲಾಪುರೆ, ಇನ್ಸ್ಪೆಕ್ಟರ್ ರಾಷ್ಟ್ರಪತಿ ಎಚ್ ಎಸ್, ಅಂಜನೇಯ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ