ಕಲಬುರಗಿ: ಹಿಂದೂಪರ ಕಾರ್ಯಕರ್ತರಿಂದ ಆಳಂದ ಚಲೋ ಹಿನ್ನೆಲೆ ಕಲಬುರಗಿ, ಆಳಂದ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಆಳಂದ ತಾಲೂಕು, ಕಲಬುರಗಿಯ ಕೆಲವೆಡೆ ನಿಷೇಧಾಜ್ಞೆ ಜಾರಿಯಲ್ಲಿದೆ. ಆಳಂದನಲ್ಲಿ ರಾಘವ ಚೈತನ್ಯ ಲಿಂಗಕ್ಕೆ ಪೂಜೆಗೆ ಅವಕಾಶ ಇದ್ದು ಕೇವಲ 10 ಜನರು ಮಾತ್ರ ತೆರಳಿ ಪೂಜೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹಿಂದೂಪರ ಕಾರ್ಯಕರ್ತರು ಆಳಂದ ಚಲೋ ಹಮ್ಮಿಕೊಂಡಿದ್ದಾರೆ.
ಆಳಂದನಲ್ಲಿ ರಾಘವ ಚೈತನ್ಯ ಲಿಂಗಕ್ಕೆ ಪೂಜೆಗೆ ಹಿಂದೂಪರ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಜಿಲ್ಲಾಡಳಿತ ಕೇವಲ ಹತ್ತು ಜನರಿಗೆ ಮಾತ್ರ ಪೂಜೆಗೆ ಅವಕಾಶ ನೀಡಿದೆ. ಈಗಾಗಲೇ ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗೆ ಆಳಂದ ತಾಲೂಕು ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆಳಂದನಲ್ಲಿರೋ ಲಾಡ್ಲೆ ಮಶಾಕ್ ದರ್ಗಾ ಬಳಿಯಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ನಡೆಸಲು ಹಿಂದೂ ಕಾರ್ಯಕರ್ತರು ನಿರ್ಧರಿಸಿದ್ದಾರೆ. ದರ್ಗಾದ ಸಂದಲ ಕೂಡಾ ಇಂದೇ ಇರೋದರಿಂದ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣ ಸೇರಿ ತಾಲೂಕಿನಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಆಳಂದ ಪಟ್ಟಣದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಡೆ ಪೊಲೀಸರ ನಿಯೋಜನೆ ಮಾಡಲಾಗಿದೆ. ದರ್ಗಾ ಬಳಿ ಬರೋರನ್ನು ತಪಾಸಣೆ ಮಾಡುತ್ತಿರುವ ಪೊಲೀಸರು, ನಿಷೇದಾಜ್ಞೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಜನರ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. ಆಳಂದ ಪಟ್ಟಣದಲ್ಲಿ ಲಾಡ್ಲೇ ಮಶಾಕ್ ದರ್ಗಾ ಇದೆ. ದರ್ಗಾದಲ್ಲಿ ಇರುವ ರಾಘವ ಚೈತನ್ಯಲಿಂಗಕ್ಕೆ ಪೂಜೆ ಮಾಡಲು ಹಿಂದೂಪರ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಜಿಲ್ಲಾಡಳಿತ ಎಲ್ಲರಿಗೂ ಪೂಜೆಗೆ ನಿರಾಕರಿಸಿದೆ.
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಪೊಲೀಸ್ ವಶಕ್ಕೆ
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಕೋಟನೂರು ಬಳಿ ವಶಕ್ಕೆ ಪಡೆಯಲಾಗಿದೆ. ಈ ಮೊದಲೇ ಆಳಂದ ಪ್ರವೇಶಕ್ಕೆ ಸ್ವಾಮೀಜಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ, ಈ ನಡುವೆ ಆಳಂದಗೆ ಹೋಗಲು ಮುಂದಾಗಿದ್ದ ಸಿದ್ದಲಿಂಗ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ವಶಕ್ಕೆ ಪಡೆಯಲಾಗಿದೆ.
ಹಿಂದೂಪರ ಕಾರ್ಯಕರ್ತರಿಂದ ಆಳಂದ ಚಲೋ ಹಿನ್ನೆಲೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಘವ ಚೈತನ್ಯ ಲಿಂಗಕ್ಕೆ ಪೂಜೆಗೆ ಅವಕಾಶ ನೀಡಲು ಆಗ್ರಹಿಸಿ ಧರಣಿ ನಡೆಸಲಾಗಿದೆ. ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಧರಣಿಗೆ ಸಾಥ್ ನೀಡಿದ್ದಾರೆ. ಈ ಮಧ್ಯೆ, ಬಡಿಗೆ ಹಿಡಿದು ದರ್ಗಾ ಬಳಿ ಸೇರಿರುವ ನೂರಾರು ಜನರು ಪೂಜೆ ಮಾಡಲು ಒಳಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
ಇದನ್ನೂ ಓದಿ: ಜಾತ್ಯತೀತತೆ ಉಳಿಯಲು ಹಿಂದೂಗಳು ಬಹುಸಂಖ್ಯೆಯಲ್ಲಿರಬೇಕು: ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ
Published On - 11:12 am, Tue, 1 March 22