ಕಲಬುರಗಿ: ಗ್ರಾಮ ವಾಸ್ತವ್ಯ ಯೋಜನೆಯಡಿ ಹಳ್ಳಿಗಳಿಗೆ ಭೇಟಿ; ಕ್ರೈಂ ತಡೆಗಟ್ಟಲು ಪೊಲೀಸರಿಂದ ವಿನೂತನ ಪ್ರಯೋಗ

ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ್ ಮತ್ತು ಪೊಲೀಸರ ತಂಡ ಪ್ರತಿ ತಿಂಗಳು ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ. ನಿಗದಿಪಡಿಸಿದ ಗ್ರಾಮದ ಸರ್ಕಾರಿ ಹಾಸ್ಟೇಲ್, ಶಾಲೆ ಕಾಲೇಜಿನಲ್ಲಿ ವಾಸ್ತವ್ಯ ಹೂಡುವ ಪೊಲೀಸ್ ಅಧಿಕಾರಿಗಳು, ಆ ಗ್ರಾಮದಲ್ಲಿನ ಮನೆ ಮನೆಗೆ ಹೋಗಿ ಕಾನೂನಿನ ಬಗ್ಗೆ ಅರಿವು ಮೂಡಿಸುತ್ತಾರೆ.

ಕಲಬುರಗಿ: ಗ್ರಾಮ ವಾಸ್ತವ್ಯ ಯೋಜನೆಯಡಿ ಹಳ್ಳಿಗಳಿಗೆ ಭೇಟಿ; ಕ್ರೈಂ ತಡೆಗಟ್ಟಲು ಪೊಲೀಸರಿಂದ ವಿನೂತನ ಪ್ರಯೋಗ
ಗ್ರಾಮ ವಾಸ್ತವ್ಯ ಯೋಜನೆಯಡಿ ಹಳ್ಳಿಗಳಿಗೆ ಭೇಟಿ
Follow us
TV9 Web
| Updated By: preethi shettigar

Updated on:Aug 02, 2021 | 4:29 PM

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ, ಬಿಸಿಲನಾಡು, ತೊಗರಿ ಕಣಜ ಎಂದೇ ಪ್ರಸಿದ್ಧವಾಗಿದೆ. ಆದರೆ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕ್ರೈಂ​ಗಳಿಂದಾಗಿ, ಕಲಬುರಗಿ ನಗರಕ್ಕೆ ಕ್ರೈಂ ಸಿಟಿ ಎನ್ನುವ ಹಣೆಪಟ್ಟಿ ಮೂಡುತ್ತಿದೆ. ಕಲಬುರಗಿಯಲ್ಲಿ ಕ್ಷುಲಕ ಕಾರಣಕ್ಕೂ ಕೊಲೆಗಳು ನಡೆಯುತ್ತಿವೆ. ಕಳ್ಳತನ, ದರೋಡೆ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ. ಹೀಗಾಗಿ ಕಲಬುರಗಿ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಆದರೆ ಈ ಹಣೆಪಟ್ಟಿಯನ್ನು ತೆಗೆದುಹಾಕಲು ಇದೀಗ ಪೊಲೀಸರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸ್ವತಃ ಕಲಬುರಗಿ ನಗರ ಪೊಲೀಸ್ ಆಯುಕ್ತರು ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಪ್ರಾರಂಭಿಸಿದ್ದಾರೆ.

ಕಳೆದ ತಿಂಗಳು ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿರುವ ನಗರ ಪೊಲೀಸ್ ಆಯುಕ್ತ, ಡಾ. ವೈ.ಎಸ್. ರವಿಕುಮಾರ್, ಈ ತಿಂಗಳು ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಬರುವ ಮತ್ತೊಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ, ಕಲಬುರಗಿ ತಾಲೂಕಿನ 60ಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ಕಲಬುರಗಿ ಗ್ರಾಮೀಣ ಠಾಣೆ, ವಿಶ್ವವಿದ್ಯಾಲಯ ಠಾಣೆ, ಫರಹತಾಬಾದ್ ಠಾಣೆಯ ವ್ಯಾಪ್ತಿಯಲ್ಲಿ ಹೆಚ್ಚು ಹಳ್ಳಿಗಳಿವೆ. ಪ್ರತಿ ತಿಂಗಳು, ಒಂದು ದಿನ, ಆಯುಕ್ತಾಲಯದ ವ್ಯಾಪ್ತಿಯಲ್ಲಿ ಬರುವ ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವುದಾಗಿ ವೈ. ಎಸ್. ರವಿಕುಮಾರ್ ಹೇಳಿದ್ದಾರೆ.

ಕ್ರೈಂ ಕಡಿಮೆ ಮಾಡಲು ಗ್ರಾಮ ವಾಸ್ತವ್ಯ ಇತ್ತೀಚೆಗೆ ಕಲಬುರಗಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಏಳು ಕೊಲೆಗಳು ಸೇರಿದಂತೆ ಮನೆ ಕಳ್ಳತನ, ದರೋಡೆ ಪ್ರಕರಣಗಳು ನಡೆದಿವೆ. ಇದರ ಜತೆಗೆ ಅಲ್ಲಲ್ಲಿ ಸಣ್ಣಪುಟ್ಟ ಆಸ್ತಿ ವಾಜ್ಯಗಳು ಕೂಡಾ ಹೆಚ್ಚಾಗಿವೆ.

ಬಹುತೇಕ ಸಂದರ್ಭದಲ್ಲಿ ಅನೇಕರು ತಮಗೆ ತೊಂದರೆ ಆದರು ಕೂಡಾ ಪೊಲೀಸ್ ಠಾಣೆಗೆ ಬಂದು ದೂರು ಕೊಡುತ್ತಿಲ್ಲ. ಸಾಮಾನ್ಯವಾಗಿ ಪೊಲೀಸರೆಂದರೆ ಅನೇಕರಿಗೆ ಭಯವಿರುತ್ತದೆ. ಹೀಗಾಗಿ ಯಾರಿದಾಂದರೂ ತೊಂದರೆ ಆದರೂ ನ್ಯಾಯ ಕೇಳಲು ಅನೇಕರು ಪೊಲೀಸರ ಬಳಿ ಹೋಗಲು ಭಯ ಪಡುತ್ತಾರೆ. ಜನರಲ್ಲಿನ ಭಯವನ್ನು ದೂರ ಮಾಡುವುದರ, ಜೊತೆಗೆ ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಮೂಲಕ ಅಪರಾಧ ಕೃತ್ಯಗಳನ್ನು ತಡೆಯುವುದು ಗ್ರಾಮ ವಾಸ್ತವ್ಯದ ಪ್ರಮುಖ ಉದ್ದೇಶವಾಗಿದೆ.

ಗ್ರಾಮ ವಾಸ್ತವ್ಯದಲ್ಲಿ ಏನು ಮಾಡುತ್ತಾರೆ? ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ್ ಮತ್ತು ಪೊಲೀಸರ ತಂಡ ಪ್ರತಿ ತಿಂಗಳು ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ. ನಿಗದಿಪಡಿಸಿದ ಗ್ರಾಮದ ಸರ್ಕಾರಿ ಹಾಸ್ಟೇಲ್, ಶಾಲೆ ಕಾಲೇಜಿನಲ್ಲಿ ವಾಸ್ತವ್ಯ ಹೂಡುವ ಪೊಲೀಸ್ ಅಧಿಕಾರಿಗಳು, ಆ ಗ್ರಾಮದಲ್ಲಿನ ಮನೆ ಮನೆಗೆ ಹೋಗಿ ಕಾನೂನಿನ ಬಗ್ಗೆ ಅರಿವು ಮೂಡಿಸುತ್ತಾರೆ. ಗ್ರಾಮದಲ್ಲಿನ ಜನರ ಜೊತೆ ಸೇರಿ ಸಭೆಯನ್ನು ನಡೆಸಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡುತ್ತಿದ್ದಾರೆ. ಚಿಕ್ಕ ಪುಟ್ಟ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಕಾನೂನನ್ನು ಯಾರು ಕೈಗೆತ್ತಿಕೊಳ್ಳಬಾರದು ಎಂದು ಜನರಿಗೆ ಮನವಿ ಮಾಡುತ್ತಿದ್ದಾರೆ.

kalaburagi police

ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್

ಚಿಕ್ಕಪುಟ್ಟ ಸಮಸ್ಯೆಗಳು ಗ್ರಾಮದ ಜನರಲ್ಲಿ ಇದ್ದರೆ, ಅವರನ್ನು ಅಲ್ಲಿಯೇ ಕರೆಸಿ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ಕೆಲಸವನ್ನು ಗ್ರಾಮ ವಾಸ್ತವ್ಯದಲ್ಲಿ ಮಾಡಲಾಗುತ್ತಿದೆ. ಜನರಿಗೆ ಪೊಲೀಸ್ ಠಾಣೆ, ಪೊಲೀಸ್ ಸಿಬ್ಬಂಧಿಯ ಮೊಬೈಲ್ ನಂಬರ್ ನೀಡಿ, ನಿಮಗೆ ಸಮಸ್ಯೆಗಳಾದರೆ, ಕರೆ ಮಾಡಿ ನಿಮ್ಮ ದೂರಿಗೆ ತಕ್ಷಣವೇ ಸ್ಪಂಧಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆ ಗ್ರಾಮದಲ್ಲಿ ಕುಟುಂಬ ಕುಟುಂಬಗಳ ನಡುವೆ, ಗುಂಪು ಗುಂಪುಗಳ ನಡುವೆ ಇರುವ ಸಂಘರ್ಷಕ್ಕೆ ತೆರೆ ಎಳೆಯುವ ಕೆಲಸವನ್ನು ಮಾಡಲಾಗುತ್ತದೆ.

ಜನರ ಮೆಚ್ಚುಗೆಗೆ ಕಾರಣವಾಗಿರುವ ಗ್ರಾಮ ವಾಸ್ತವ್ಯ ಗ್ರಾಮೀಣ ಭಾಗದ ಜನರು ಇನ್ನು ಕೂಡಾ ಪೊಲೀಸರು ಅಂದರೆ ಭಯ ಪಡುತ್ತಾರೆ. ಅನೇಕರು ಠಾಣೆಯ ಮೆಟ್ಟಿಲು ಹತ್ತಲು ಹಿಂದೇಟು ಹಾಕ್ತಾರೆ. ಆದರೆ ಇದೀಗ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ಪೊಲೀಸರು ಹೋಗಿ, ಜನರಿಗೆ ನಿಮ್ಮ ಜೊತೆ ನಾವಿದ್ದೇವೆ ಎಂದು ಅಭಯ ನೀಡಿದ್ದರಿಂದ ಜನರಲ್ಲಿ ಪೊಲೀಸರ ಬಗ್ಗೆ ಇದ್ದ ತಪ್ಪು ಕಲ್ಪನೆಗಳು ದೂರವಾಗುತ್ತಿವೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಇರಬೇಕು ಎಂದು ಗೃಹ ಇಲಾಖೆ ಅನೇಕ ವರ್ಷಗಳಿಂದ ಹೇಳುತ್ತಾ ಬಂದಿದೆ. ಆದರೆ ಬಹುತೇಕ ಕಡೆ ಇನ್ನು ಅದು ಜಾರಿಯಾಗಿಲ್ಲ. ಆದರೆ ಇದೀಗ ಕಲಬುರಗಿ ನಗರ ಪೊಲೀಸರು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೊಳಿಸುತ್ತಿರುವುದು ಜನರ ಸಂತಸವನ್ನು ಹೆಚ್ಚಿಸಿದೆ.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಅನೇಕ ಹಳ್ಳಿಗಳಿವೆ. ಹೀಗಾಗಿ ಪ್ರತಿ ತಿಂಗಳು ಒಂದೊಂದು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ. ಇತ್ತೀಚೆಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕ್ರೈಂ​ಗಳು ಹೆಚ್ಚಾಗುತ್ತಿವೆ. ಕ್ರೈಂ ಕಡಿಮೆ ಮಾಡಬೇಕು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಇರಬೇಕು. ಜನರು ಪೊಲೀಸರು ಅಂದರೆ ಭಯ ಪಡದೆ, ತಮ್ಮ ದೂರುಗಳನ್ನು ಹೇಳಿಕೊಳ್ಳಲು ನಿರ್ಭಿತ ವಾತಾವರಣ ನಿರ್ಮಾಣವಾಗಬೇಕು ಎಂದು ಗ್ರಾಮ ವಾಸ್ತವ್ಯ ಪ್ರಾರಂಭಿಸಲಾಗಿದೆ. ಇದರಿಂದ ಕ್ರೈಂ ಕಡಿಮೆಯಾಗುತ್ತವೆ. ಜನರಿಗೆ ಪೊಲೀಸರ ಮೇಲೆ ನಂಬಿಕೆ ಕೂಡಾ ಹೆಚ್ಚಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್ ರವಿಕುಮಾರ್ ತಿಳಿಸಿದ್ದಾರೆ.

ಸ್ವತ ಕಲಬುರಗಿ ನಗರ ಪೊಲೀಸ್ ಆಯುಕ್ತರು ನಮ್ಮ ಗ್ರಾಮಕ್ಕೆ ಬಂದು, ಇಲ್ಲಿಯೇ ವಾಸ್ತವ್ಯ ಮಾಡಿ, ಎಲ್ಲರ ಜೊತೆ ಊಟ ಮಾಡಿ, ಅನೇಕ ಸಭೆಗಳನ್ನು ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ನಾವು ಪೊಲೀಸರು ಅಂದರೆ ಭಯ ಪಡುತ್ತಿದ್ದೆವು. ಇದೀಗ ಆ ಭಯವನ್ನು ಹೋಗಲಾಡಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಯಿಂದ ಬಾಳಲು ಹೇಳಿದ್ದಾರೆ. ನಮ್ಮ ದೂರುಗಳಿಗೆ ಸ್ಪಂಧಿಸಿದ್ದಾರೆ. ಇದು ನಿಜಕ್ಕೂ ನಮಗೆ ಖುಷಿ ನೀಡಿದೆ ಎಂದು ಸರಡಗಿ ಗ್ರಾಮಸ್ಥ ಉಳವಪ್ಪಾ ಹೇಳಿದ್ದಾರೆ.

ವರದಿ: ಸಂಜಯ್ ಚಿಕ್ಕಮಠ

ಇದನ್ನೂ ಓದಿ: ಪೊಲೀಸರು ವಶಪಡಿಸಿಕೊಂಡಿದ್ದ ಸ್ಫೋಟಕಗಳು ನಾಪತ್ತೆ, ಗೋದಾಮು ಮಾಲೀಕ ಎಸ್ಕೇಪ್

33 ರೌಡಿಶೀಟರ್‌ಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ ಪೊಲೀಸರು; ಇಬ್ಬರು ರೌಡಿಗಳ ವಿರುದ್ಧ ಎಫ್ಐಆರ್ ದಾಖಲು

Published On - 3:37 pm, Mon, 2 August 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ