ಕಲಬುರಗಿ: ಅಂಚೆ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು SSLC ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ ಅಭ್ಯರ್ಥಿಗಳು

ಪರೀಕ್ಷಾ ಅಕ್ರಮದ‌ ತವರು ಕಲಬುರಗಿಯಲ್ಲಿಗ ನಕಲಿ‌ ಅಂಕಪಟ್ಟಿ ಜಾಲ ಸಕ್ರೀಯವಾಗಿದಿಯಾ ಎನ್ನುವ ಪ್ರಶ್ನೆ ಎದ್ದಿದೆ. ಏಕೆಂದರೆ, ಅಂಚೆ ಇಲಾಖೆಯ 1714 ಹುದ್ದೆಗಳ ನೇಮಕಾತಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ನಕಲಿ ಮಾರ್ಕ್​ ಕಾರ್ಡ್ ನೀಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಅಂಕಪಟ್ಟಿ ಪರಿಶೀಲನೆ ವೇಳೆ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ಕಲಬುರಗಿ: ಅಂಚೆ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು SSLC ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ ಅಭ್ಯರ್ಥಿಗಳು
ಅಂಚೆ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು SSLC ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ ಅಭ್ಯರ್ಥಿಗಳು
Image Credit source: Pixabay
Edited By: Rakesh Nayak Manchi

Updated on: Jan 05, 2024 | 9:07 AM

ಕಲಬುರಗಿ, ಜ.5: ಅಂಚೆ ಇಲಾಖೆಯ 1714 ಹುದ್ದೆಗಳ ನೇಮಕಾತಿಯಲ್ಲಿ (Postal Department Recruitment) ಉದ್ಯೋಗ ಗಿಟ್ಟಿಸಿಕೊಳ್ಳಲು ಕಲಬುರಗಿಯಲ್ಲಿ (Kalaburagi) ಅಭ್ಯರ್ಥಿಗಳು SSCL ನಕಲಿ ಮಾರ್ಕ್​ ಕಾರ್ಡ್ ನೀಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಅಂಚೆ ಇಲಾಖೆಯಿಂದ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಪರಿಶೀಲನೆ ವೇಳೆ ಎಂಟು ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದು, ನಕಲಿ ಅಂಕಪಟ್ಟಿ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಅಂಚೆ ಇಲಾಖೆಯಿಂದ ವಂಚನೆ ದೂರು‌ ನೀಡಲು ಸಿದ್ಧತೆ ನಡೆಸಲಾಗುತ್ತಿದೆ.

ಪರೀಕ್ಷಾ ಅಕ್ರಮದ‌ ತವರು ಎಂಬ ಕುಖ್ಯಾತಿಗೆ ಒಳಗಾಗುತ್ತಿರುವ ಕಲಬುರಗಿಯಲ್ಲಿ ಇದೀಗ ಮತ್ತೊಂದು ಅಕ್ರಮ ಬಯಲಿಗೆ ಬಂದಿದೆ. ಈ ಹಿಂದೆ 545 ಪಿಎಸ್​ಐ ನೇಮಕಾತಿ ಪರೀಕ್ಷೆ, ಕೆಇಎ ವಿವಿಧ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಇಲಾಖೆಯಲ್ಲಿನ ನೇಮಕಾತಿಯಲ್ಲಿ ಅಕಮ್ರ ಎಸಗಲಾಗಿದೆ. ವ್ಯಾಪಕ ಅಕ್ರಮ ನಡೆಯುತ್ತಿರುವುದರಿಂದ ಜಿಲ್ಲೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸದಿರುವ ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿ ಉದ್ಯೋಗ ನೇಮಕಾತಿಯಲ್ಲಿ ಅಕ್ರಮ: ಬರೆದದ್ದು ಒಂದು ಪರೀಕ್ಷೆ, ಪ್ರಕಟಿಸಿದ್ದು ಎರಡೆರಡು ಫಲಿತಾಂಶ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ (KSET 2023) ಪರೀಕ್ಷೆ ಜನವರಿ 13 ರಂದು ರಾಜ್ಯಾದ್ಯಂತ ನಡೆಯಲಿದೆ. ಆದರೆ, ಕಲಬುರಗಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸದೆ ನಿಗದಿ ಮಾಡಲಾಗಿರುವ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us