AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠಾಧೀಶರ ಅಸ್ಮಿತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ: ಪ್ರಣವಾನಂದ ಸ್ವಾಮಿಜಿ ಆಕ್ರೋಶ

ಕಾಂಗ್ರೆಸ್ ಪಕ್ಷಕ್ಕೆ ಸಿದ್ರಾಮಯ್ಯ ದುರ್ಯೋಧನ ಆಗಿದ್ದಾರೆ. ಸಿದ್ದರಾಮಯ್ಯರಿಂದ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತಿದೆ. ಈ ವಿಚಾರ ರಾಹುಲ್ ಗಾಂಧಿ ಅವರಿಗೆ ಹೇಳಲು ಏಪ್ರಿಲ್ 3 ರಂದು ದೆಹಲಿಗೆ ತೆರಳಲಿದ್ದೇವೆ ಎಂದು ಹಾವೇರಿ ಜಿಲ್ಲೆಯ ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಮಠಾಧೀಶರ ಅಸ್ಮಿತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ: ಪ್ರಣವಾನಂದ ಸ್ವಾಮಿಜಿ ಆಕ್ರೋಶ
ಪ್ರಣವಾನಂದ ಸ್ವಾಮಿಜಿ
TV9 Web
| Updated By: ganapathi bhat|

Updated on: Mar 26, 2022 | 4:28 PM

Share

ಕಲಬುರಗಿ: ಮಠಾಧೀಶರ ಅಸ್ಮಿತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ. ಸಿದ್ದರಾಮಯ್ಯ ರಾಜಕೀಯದಲ್ಲಿ ಇರಲು ಲಾಯಕ್ಕಿಲ್ಲ. ಕೂಡಲೇ ಅವರು ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ಒಂದು ಕಡೆ ದೇವರ ಸನ್ನಿಧಿಯಲ್ಲಿ ಡ್ಯಾನ್ಸ್ ಮಾಡಿ ನಾಟಕ ಮಾಡ್ತೀರಿ. ಇನ್ನೊಂದು ಕಡೆ ಮಠಾಧೀಶರ ಅಸ್ಮಿತೆ ಬಗ್ಗೆ ಮಾತಾಡ್ತೀರಿ. ನಿಮಗೆ ತಾಕತ್ ಇದ್ರೆ ಮುಲ್ಲಾ ಮತ್ತು ಪಾದ್ರಿಗಳ ಬಗ್ಗೆ ಮಾತನಾಡಿ ನೋಡೋಣ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಸ್ವಾಮಿಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಒಬ್ಬ ಮೆಂಟಲ್ ಪೇಶಂಟ್ ಆಗಿದ್ದಾರೆ. ಅವರನ್ನು ಕೂಡಲೇ ನಿಮ್ಹಾನ್ಸ್​ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಾಗಿದೆ. ಇನ್ನು ಮುಂದೆ ಸಿದ್ದರಾಮಯ್ಯರನ್ನು ನಾವು ಬಹಿಷ್ಕಾರ ಮಾಡುತ್ತೇವೆ. ಸಿದ್ದರಾಮಯ್ಯ ಭಾಗವಹಿಸುವ ವೇದಿಕೆಯಲ್ಲಿ ಮಠಾಧೀಶರು ಪಾಲ್ಗೊಳ್ಳದಿರಲು ನಿರ್ಣಯ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ರಾಮಯ್ಯ ದುರ್ಯೋಧನ ಆಗಿದ್ದಾರೆ. ಸಿದ್ದರಾಮಯ್ಯರಿಂದ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತಿದೆ. ಈ ವಿಚಾರ ರಾಹುಲ್ ಗಾಂಧಿ ಅವರಿಗೆ ಹೇಳಲು ಏಪ್ರಿಲ್ 3 ರಂದು ದೆಹಲಿಗೆ ತೆರಳಲಿದ್ದೇವೆ ಎಂದು ಹಾವೇರಿ ಜಿಲ್ಲೆಯ ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ (High court)​ ನೀಡಿರುವ ತೀರ್ಪಿಗೆ ವಿರುದ್ಧವಾಗಿ ನಿನ್ನೆ (ಮಾರ್ಚ್ 25) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವಾ? ಎಂದು  ಕೇಳಿದ್ದರು. ಈ ಮಾತು ರಾಜ್ಯದಾದ್ಯಂತ ವಿವಾದ ಸೃಷ್ಟಿ ಮಾಡಿದ್ದು, ಇಂದೀಗ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಡಾ. ಯತೀಂದ್ರ (Dr Yatindra) ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ದುಪಟ್ಟಾವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಕೆ ಮಾಡಿಲ್ಲ. ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಅಪಮಾನ ಮಾಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಿಜಾಬ್ ಇಲ್ಲದೆ ಪರೀಕ್ಷೆಗೆ ಬರುತ್ತಿಲ್ಲ. ಹಿಜಾಬ್ ಬದಲಿಗೆ ದುಪಟ್ಟಾಗೆ ಅವಕಾಶ ಕೇಳಿದ್ದಾರೆ. ಇದನ್ನು ವಿಧಾನಸಭೆಯಲ್ಲೂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಇದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರಶ್ನೆ ಕೇಳಿದ್ದರು.

ಸ್ವಾಮೀಜಿಗಳ ಬಟ್ಟೆ ಹಿಜಾಬ್​ಗೆ  ಹೋಲಿಸಿದ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್​ ಮೂಲಕ ಸ್ಪಷ್ಟನೆ 

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

ಇದನ್ನೂ ಓದಿ: ಊಟ ಮಾಡುವುದನ್ನು ನಿಲ್ಲಿಸಿ ಎದ್ದುನಿಂತು ಗೌರವ ಸೂಚಿಸಿದ ಮಹಿಳೆಯರಿಗೆ ಸಿದ್ದರಾಮಯ್ಯ ಏಳಬೇಡಿ, ಊಟ ಮಾಡಿ ಅಂದರು

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!