ಬಿಸಿಲನಾಡನಲ್ಲಿ ನುಡಿ ಜಾತ್ರೆಗೆ ನೂರಾರು ಅಡ್ಡಿ, DCM ವಿರುದ್ಧ ಜನರ ಆಕ್ರೋಶ

ಕಲಬುರಗಿ: ಈ ಬಾರಿಯ ಅಕ್ಷರ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಈ ಬಾರಿ ನುಡಿ ಜಾತ್ರೆ ನಡೆಯಲಿದೆ. ಆದ್ರೆ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಸರಿಯಾದ ಸಹಕಾರ ಸಿಗುತ್ತಿಲ್ಲ ಅಂತಾ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ಉಸ್ತುವಾರಿ ಸಚಿವರೇ ಕಾಣೆಯಾಗಿರೋದು ಉರಿಯುವ ಬೆಂಕಿಗೆ ತುಪ್ಪ ಸುರಿದಿದೆ. ಅರೆ ಇದೇನಿದು, ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರಾ ಅಂತಾ ಅನುಮಾನ ಪಡಬೇಡಿ. ಹೀಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾ ಸಚಿವ ಕಾರಜೋಳ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ಬಲವಾದ ಕಾರಣವಿದೆ. […]

ಬಿಸಿಲನಾಡನಲ್ಲಿ ನುಡಿ ಜಾತ್ರೆಗೆ ನೂರಾರು ಅಡ್ಡಿ, DCM ವಿರುದ್ಧ ಜನರ ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on:Feb 01, 2020 | 4:29 PM

ಕಲಬುರಗಿ: ಈ ಬಾರಿಯ ಅಕ್ಷರ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಈ ಬಾರಿ ನುಡಿ ಜಾತ್ರೆ ನಡೆಯಲಿದೆ. ಆದ್ರೆ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಸರಿಯಾದ ಸಹಕಾರ ಸಿಗುತ್ತಿಲ್ಲ ಅಂತಾ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಜೊತೆಗೆ ಉಸ್ತುವಾರಿ ಸಚಿವರೇ ಕಾಣೆಯಾಗಿರೋದು ಉರಿಯುವ ಬೆಂಕಿಗೆ ತುಪ್ಪ ಸುರಿದಿದೆ.

ಅರೆ ಇದೇನಿದು, ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರಾ ಅಂತಾ ಅನುಮಾನ ಪಡಬೇಡಿ. ಹೀಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾ ಸಚಿವ ಕಾರಜೋಳ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ಬಲವಾದ ಕಾರಣವಿದೆ.

ಅಂದಹಾಗೆ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯುತ್ತಿದೆ. ಆದ್ರೂ, ಜಿಲ್ಲಾ ಉಸ್ತುವಾರಿ ಸಚಿವರಿಂದ ಮತ್ತು ಸರ್ಕಾರದಿಂದ ಸರಿಯಾದ ಸಹಕಾರ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಮ್ಮೇಳನಕ್ಕೆ ನೀಡಿದ್ದ ಅನುದಾನವೂ ಬಂದಿಲ್ಲ! ಬರೋಬ್ಬರಿ 33 ವರ್ಷಗಳ ನಂತರ ಶರಣರು, ಸೂಫಿಸಂತರ ನಾಡು ಕಲಬುರಗಿಯಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಫೆಬ್ರವರಿ 5, 6 ಮತ್ತು 7 ರಂದು ನಡೆಯುಲಿರುವ ಅಕ್ಷರ ಜಾತ್ರೆಗೆ ಕೇವಲ 4 ದಿನ ಬಾಕಿ ಇದ್ದು, ಇದುವರೆಗೆ ಜಿಲ್ಲೆಗೆ ಕಾಲಿಡದ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ಕಲಬುರಗಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಕಾರಜೋಳ ಕಾಣೆಯಾಗಿದ್ದಾರೆ, ಹುಡುಕಿಕೊಡಿ’ ಅಂತಾ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಕೈಯಲ್ಲಿ ಪೋಸ್ಟರ್‌ ಹಿಡಿದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಮತ್ತೊಂದ್ಕಡೆ ಸಮ್ಮೇಳನಕ್ಕಾಗಿ ಬರಬೇಕಿದ್ದ 14 ಕೋಟಿ ರೂಪಾಯಿ ಸಹ ಬಿಡುಗಡೆಯಾಗಿಲ್ಲ. ಇದರಿಂದ ಕಾರ್ಯಕ್ರಮದ ಖರ್ಚಿಗೆ ಕೂಡ ಹಣವಿಲ್ಲದೆ ಪರದಾಡುವಂತಾಗಿದೆ.

ಉಸ್ತುವಾರಿ ಸಚಿವರು ಸಾಹಿತ್ಯ ಸಮ್ಮೇಳನ ನಡೆವ ಜಾಗಕ್ಕೆ ಆಗಮಿಸದೆ ಕೇವಲ ಕರೆ ಮಾಡಿ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಕಾರ್ಯಕ್ರಮದ ಸಿದ್ಧತೆಗಳಿಗೂ ಭಾರಿ ಹಿನ್ನಡೆಯಾಗಿದ್ದು ಈ ಕೂಡಲೇ ಅಲರ್ಟ್ ಆಗಿ ಸಮ್ಮೇಳನ ಸರಾಗವಾಗಿ ನಡೆಯಲು ಸಾಥ್ ನೀಡಬೇಕು ಅನ್ನೋದು ಹೋರಾಟಗಾರರ ಆಗ್ರಹ. ಆದ್ರೆ ಇದನ್ನೆಲ್ಲಾ ಡಿಸಿಎಂ ಕಾರಜೋಳ ಅವರು ಹೇಗೆ ಸ್ವೀಕರಿಸ್ತಾರೆ ಅನ್ನೋದನ್ನ ಕಾದು ನೋಡಬೇಕು.

Published On - 4:25 pm, Sat, 1 February 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?