ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು ಜೀವತೊರೆಯುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಇಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ (Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 16, 2024 | 4:36 PM

ಕಲಬುರಗಿ, ಅ.16: A23 ಆನ್​ಲೈನ್ ರಮ್ಮಿ ಗೇಮ್​ನಿಂದ ದಿನನಿತ್ಯ ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ(Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಬ್ಯಾನ್ ಮಾಡಬೇಕು. ಇದರಿಂದ ಪ್ರತಿನಿತ್ಯ ನೂರಾರು ಯುವಕರು ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ಬೀದಿಗೆ ಬರುತ್ತಿದ್ದಾರೆ. ರಮ್ಮಿ ಗೇಮ್ ವ್ಯಾಮೋಹಕ್ಕೋಳಗಾಗಿ ಯುವಕರು ಹಾದಿ ತಪ್ಪುತ್ತಿದ್ದು, ಲಕ್ಷಾಂತರ ರೂಪಾಯಿ ಸಾಲ ಶೂಲ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈ ರಮ್ಮಿ ಗೇಮ್ ಹಾವಳಿ ಹೆಚ್ಚಾಗಿದ್ದು, ಯುವಕರು ಕೆಲಸ ಕಾರ್ಯ ಬಿಟ್ಟು ಜೂಜಾಟದ ಕಡೆ ಮುಖ ಮಾಡುತ್ತಿದ್ದಾರೆ. ಅಲ್ಲದೇ ಲಕ್ಷಾಂತರ ರೂಪಾಯಿ ಸಾಲ ಮಾಡಿ ಮನೆ ಮಠ ಬಿಟ್ಟು ತಿರುಗುತ್ತಿದ್ದಾರಂತೆ. ಈ ಬಗ್ಗೆ ಈಗಾಗಲೇ ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಾಗಿದೆ. ಆದರೂ ಸಹ ಸರ್ಕಾರವಾಗಲಿ, ಗೃಹ ಇಲಾಖೆಯಾಗಲಿ ಆನ್ ಲೈನ್ ರಮ್ಮಿ ಗೇಮ್​ಗೆ ಕಡಿವಾಣ ಹಾಕುವುದಕ್ಕೆ ಮುಂದಾಗುತ್ತಿಲ್ಲ.

ಇದರಿಂದ ಲಕ್ಷಾಂತರ ಯುವಕರ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಆನ್​ಲೈನ್ ರಮ್ಮಿ ಗೇಮ್​ನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ‘ನಮ್ಮ ಕರ್ನಾಟಕ ಸೇನೆ’ ಕಲಬುರಗಿ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನೂರಾರು ಕನ್ನಡ ಪರ ಸಂಘಟನಯ ಕಾರ್ಯಕರ್ತರು, ರಮ್ಮಿ ಬ್ಯಾನ್ ಮಾಡುವಂತೆ ಒತ್ತಾಯಿಸಿದರು. ಸರ್ಕಾರ ತಕ್ಷಣವೇ ಮದ್ಯಪ್ರವೇಶಿಸಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ